ಬುಧವಾರ, ಮಾರ್ಚ್ 29, 2023
27 °C

ಶಿವಮೊಗ್ಗ: ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಸಂಭ್ರಮಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನವಟ್ಟಿ: ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಆನವಟ್ಟಿ ಬ್ಲಾಕ್ ಅಧ್ಯಕ್ಷ ಆರ್.ಸಿ. ಪಾಟೀಲ್ ಸಂತಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಮಧು ಬಂಗಾರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ಎಚ್.ಕೆ. ಪಾಟೀಲ್ ಸೇರಿ ಹಲವು ನಾಯಕರ ಶ್ರಮದಿಂದಾಗಿ ಈ ಗೆಲುವು ಸಾಧ್ಯವಾಗಿದೆ. ಬಿಜೆಪಿ ಹಣದ ಹೊಳೆಯನ್ನೇ ಹರಿಸಿದರೂ, ಕಾಂಗ್ರೆಸ್‌ ಕಡೆಗೆ ಜನರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಅಗತ್ಯ ಬೆಲೆಗಳ ಏರಿಕೆಯಿಂದಾಗಿ ಮೋದಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಬಿಜೆಪಿ ಜನರ ನಿರೀಕ್ಷೆಯನ್ನು ಹುಸಿ ಮಾಡಿದೆ ಎಂದರು.

ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಮಧುಕೇಶ್ವರ ಪಾಟೀಲ್, ಖಲಂದರ್ ಸಾಬ್, ಹಬೀಬ್‌ ಉಲ್ಲಾ ಹವಾಲ್ದಾರ್, ಸಂಜೀವ ತರಕಾರಿ, ವಿಜಯ ಶಕುನವಳ್ಳಿ, ಕೃಷ್ಣಪ್ಪ ತಲ್ಲೂರು, ದರ್ಶನ ಶಾಂತಿನಗರ ಅವರೂ ಈ ಸಂದರ್ಭದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು