ಗುರುವಾರ , ಜನವರಿ 21, 2021
18 °C

ಸಂಘಟಿತ ಪ್ರಯತ್ನ ಗೆಲುವಿಗೆ ಸಹಕಾರಿ: ಕಿಮ್ಮನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನಗಳ ಮೂಲಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಕೋರಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.

ಹಳ್ಳಿಗಳಲ್ಲಿ ಕಾಂಗ್ರೆಸ್ ಬೇರುಗಳು ಗಟ್ಟಿಯಾಗಿವೆ. ಪಕ್ಷ ಹಲವು ದಶಕಗಳು ಹಳ್ಳಿಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಗ್ರಾಮೀಣ ಆಡಳಿತಕ್ಕೆ ಶಕ್ತಿ ತುಂಬಿದೆ. ಈ ಬಾರಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಸುವ ಮೂಲಕ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಬೇಕು. ಸಂಘಟನೆಯನ್ನೂ ಮತ್ತಷ್ಟು ಬಲಗೊಳಿಸಬೇಕು ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌, ಬಿಜೆಪಿ ಆಡಳಿತದ ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಯವೈಖರಿ, ಜನ ವಿರೋಧಿ, ರೈತ ವಿರೋಧಿ ನೀತಿಗಳು, ಆಡಳಿತ ವೈಫಲ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಪ್ರತಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ಪ್ರಮುಖರನ್ನು ವೀಕ್ಷಕರನ್ನಾಗಿ ನೇಮಿಸಲಾಗುವುದು.  ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿರುವ ವಿಷಯ ಜನರಿಗೆ ತಿಳಿಸಬೇಕು. ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಂಘಟಿತ ಪ್ರಚಾರ ನಡೆಸಬೇಕು ಎಂದು ಕೋರಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಎಚ್.ಎಂ.ಚಂದ್ರಶೇಖರಪ್ಪ, ಶಾಂತವೀರಪ್ಪ ಗೌಡ, ಕಾಂಗ್ರೆಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್, ಇಸ್ಮಾಯಿಲ್ ಖಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಭೂಪಾಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯರಾದ ಕಲಗೋಡು ರತ್ನಾಕರ, ಭೀಮನೇರಿ ಶಿವಪ್ಪ, ನರಸಿಂಗನಾಯ್ಕ, ರೇಖಾ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಫಕೀರಪ್ಪ, ಆರ್.ಸಿ.ಪಾಟೀಲ್, ಅಣ್ಣಪ್ಪ, ಬಿ.ಜೆ.ನಾಗರಾಜ್, ರಾಘವೇಂದ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು