ತೀರ್ಥಹಳ್ಳಿ: ‘ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ದಲಿತ ವಿರೋಧಿ ಎಂದು ಬಿಂಬಿಸಲು ಕಾಂಗ್ರೆಸ್ ಸಂಚು ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ವಿನಾಶಕ್ಕೆ ಹೋಗಿದ್ದು, ಮರು ಹುಟ್ಟು ಪಡೆಯುವುದು ಸಾಧ್ಯವಿಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದವಳ್ಳಿ ಸೋಮಶೇಖರ್ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

‘ಕಾಂಗ್ರೆಸ್ ನೈತಿಕತೆ ಇಲ್ಲದ ಪಕ್ಷವಾದ್ದರಿಂದ ಇಂದಿಗೂ ಮುಸ್ಲಿಮರ ತುಷ್ಟೀಕರಣ, ಓಲೈಕೆ ರಾಜಕಾರಣವನ್ನೇ ಮಾಡುತ್ತಿದೆ. ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದೆ. ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಿಗೆ ಪ್ರೋತ್ಸಾಹಧನ ಲಭಿಸುತ್ತಿಲ್ಲ. ಲೋಕಸಭೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸುವ ಮೂಲಕ ಮಹಿಳೆಯರನ್ನು ಅವಮಾನಿಸಿದೆ’ ಎಂದು ಆರೋಪಿಸಿದರು.

‘ಕ್ಷೇತ್ರದ ಮಾಜಿ ಶಾಸಕ ಕಿಮ್ಮನೆ ರತ್ನಾಕರ ಮೈಕ್ ಸಿಕ್ಕರೆ ಏನು ಬೇಕಾದರೂ ಮಾತನಾಡುತ್ತಾರೆ. ಎರಡು ಬಾರಿ ಸೋತ ಅವರು ಸ್ಥೀಮಿತ ಕಳೆದುಕೊಂಡಿದ್ದಾರೆ. ಶಾಸಕರು ಮದುವೆ ಮನೆ, ಸಾವಿನ ಮನೆಗೆ ಹೋದರೆ ತಪ್ಪೇನು’ ಎಂದು ಪ್ರಶ್ನಿಸಿದರು.

‘ದಲಿತರು, ಯುವಕರು, ಮಹಿಳೆಯರನ್ನು ಎತ್ತಿಕಟ್ಟುವ ಕಾಂಗ್ರೆಸ್ ತಂತ್ರಗಾರಿಕೆ ವಿಫಲವಾಗಿದೆ. ತೀರ್ಥಹಳ್ಳಿಯ ಪಿಎಸ್ಐ ಅಪರಾಧಿಗಳಿಗೆ ಬಿರಿಯಾನಿ ಕೊಟ್ಟು, ಕಾಂಗ್ರೆಸ್ ಮುಖಂಡರನ್ನು ಸತ್ಕರಿಸಿ ಮನೆಗೆ ಕಳುಹಿಸುತ್ತಿರುವುದು ದುರಂತ. ಹಿಂದೂ ಯುವಕರನ್ನು ಠಾಣೆಗೆ ಕರೆಸಿ ಹಲ್ಲೆ ಮಾಡಿರುವುದು ಖಂಡನೀಯ. ದಂಧೆಕೋರರೊಂದಿಗೆ ಶಾಮೀಲಾಗಿರುವ ಪಿಎಸ್ಐ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಮೇಗರವಳ್ಳಿ ಆಗ್ರಹಿಸಿದರು.

ಯಶೋಧಾ ಮಂಜುನಾಥ್, ಸೊಪ್ಪುಗುಡ್ಡೆ ರಾಘವೇಂದ್ರ, ಸಂತೋಷ್ ದೇವಾಡಿಗ, ಮಹಾಂತ್, ಪ್ರದೀಪ್ ಗಭಡಿ, ಪೂರ್ಣೇಶ್ ಪೂಜಾರಿ, ಅಣ್ಣಪ್ಪ ಕುರುವಳ್ಳಿ, ಸಂತೋಷ್ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-42-947456542

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.