ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಪ್ರತಿ ತಾಲ್ಲೂಕಿಗೂ 50 ಹಾಸಿಗೆಗಳ ಕೋವಿಡ್‌ ಕೇಂದ್ರ

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್.ಸುಂದರೇಶ್ ಆಗ್ರಹ
Last Updated 15 ಜುಲೈ 2020, 13:45 IST
ಅಕ್ಷರ ಗಾತ್ರ

ಶಿವಮೊಗ್ಗ: ಹೊರ ಜಿಲ್ಲೆಗಳಿಂದ ಬರುತ್ತಿರುವ ಜನರು ಗ್ರಾಮೀಣ ಭಾಗದಲ್ಲಿ ಸೋಂಕು ಹರಡುವ ಸಾಧ್ಯತೆ ಇದೆ. ಇಂತಹ ಸನ್ನಿವೇಶ ಎದುರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್.ಸುಂದರೇಶ್ ಆಗ್ರಹಿಸಿದರು.

ಜಿಲ್ಲೆಯಲ್ಲಿಸೋಂಕು ವ್ಯಾಪಕವಾಗಿ ಹರಡುವುದನ್ನುತಡೆಯಲುಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕೆ ಪೂರಕವಾದ ಪರಿಕರಗಳನ್ನು ಒದಗಿಸಬೇಕು. ಪ್ರತಿ ತಾಲ್ಲೂಕು ಕೇಂದ್ರದಲ್ಲೂ ಕನಿಷ್ಠ 50 ಹಾಸಿಗೆಗಳ ಕೋವಿಡ್‌ ಆರೈಕೆ ಕೇಂದ್ರತೆರೆಯಬೇಕು ಎಂದುಬುಧವಾರ ಆನ್‌ಲೈನ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಜನರು ಶಿವಮೊಗ್ಗ ಜಿಲ್ಲೆಗೆ ಬರುತ್ತಿದ್ದಾರೆ. ಲಾಕ್‌ಡೌನ್ ಮಾಡುವಮೊದಲು ಅಗತ್ಯವಾದ ಹಾಸಿಗೆ, ವೆಂಟಿಲೇಟರ್, ಸ್ಯಾನಿಟೈಸರ್, ಆ್ಯಂಬುಲೆನ್ಸ್ ವಾಹನಗಳ ವ್ಯವಸ್ಥೆ ಮಾಡಬೇಕು.ಜನರೇಹೆದರಿಕೆಯಿಂದ ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್‌ಗೆ ಒಳಗಾಗುತ್ತಿದ್ದಾರೆ. ಅದಕ್ಕಾಗಿ ಪೂರ್ಣ ಪ್ರಮಾಣದಲ್ಲಿ ಲಾಕ್‌ಡೌನ್ ಮಾಡಬೇಕು. ಅದಕ್ಕೂ ಮೊದಲು ಜಿಲ್ಲಾ ಕೇಂದ್ರದಲ್ಲಿ 500ಹಾಸಿಗೆ, ಪ್ರತಿ ತಾಲ್ಲೂಕಿನಲ್ಲೂ50 ಹಾಸಿಗೆಗಳ ಕೇಮದ್ರಗಳು ಸಿದ್ಧವಿರಬೇಕು ಎಂದು ಸಲಹೆ ನೀಡಿದರು.

ಕೊರೊನಾ ತಡೆಯುವ ನೆಪದಲ್ಲಿ ರಾಜ್ಯದ ಮಂತ್ರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಬೆಡ್‌ಗಳಬಾಡಿಗೆ, ವೆಂಟಿಲೇಟರ್ಖರೀದಿಸುವಲ್ಲಿ ₹ 25 ಕೋಟಿ ಲೂಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳೇ ಬಾಡಿಗೆಬೇಡ ಎಂದರೂ ಭ್ರಷ್ಟಾಚಾರ ನಿಂತಿಲ್ಲ.ಯಡಿಯೂರಪ್ಪ ಅವರು ಯಾರನ್ನೂ ಕಂಟ್ರೋಲ್ ಮಾಡದ ದುರ್ಬಲ ಮುಖ್ಯಮಂತ್ರಿ. ಸಚಿವರು ಮಾನವೀಯತೆ ಮರೆತಿದ್ದಾರೆ ಎಂದು ಟೀಕಿಸಿದರು.

ಶಿವಮೊಗ್ಗ ನಗರ ಪಾಲಿಕೆಯಲ್ಲಿ ಕನಿಷ್ಠ ಅಕ್ಕಿ, ದಿನಸಿ ಸಾಮಗ್ರಿ ನೀಡಲು ಸತಾಯಿಸಲಾಯಿತು. ಅಲ್ಲೂ ಅವ್ಯವಹಾರ ನಡೆದಿದೆ. ಭ್ರಷ್ಟಾಚಾರದ ವಿರುದ್ಧಪಂಚಾಯ್ತಿ ಮಟ್ಟದಿಂದ ಕಾಂಗ್ರೆಸ್ ಹೋರಾಟ ಮಾಡಲಿದೆ. ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ಈಗ ಇಲ್ಲ. ಆದರೆ, ಜನರಿಗೆಮಾಹಿತಿ ತಲುಪಿಸುವ ಕೆಲಸ ಮಾಡಲಾಗುವುದುಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಾಧ್ಯಮ ವಕ್ತಾರ ಚಂದ್ರಭೂಪಾಲ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT