ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕಾರಿಪುರ: ಬಿಜೆಪಿ– ಜೆಡಿಎಸ್ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published 5 ಆಗಸ್ಟ್ 2024, 16:18 IST
Last Updated 5 ಆಗಸ್ಟ್ 2024, 16:18 IST
ಅಕ್ಷರ ಗಾತ್ರ

ಶಿಕಾರಿಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೈಗೊಂಡ ಮೈಸೂರು ಪಾದಯಾತ್ರೆ ಖಂಡಿಸಿ ಕಾಂಗ್ರೆಸ್ ಮುಖಂಡರು ಸೋಮವಾರ ಖಾಸಗಿ ಬಸ್ ನಿಲ್ದಾಣ ಸಮೀಪ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದೇ ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿದ್ದಾರೆ. ಕಳಂಕ ರಹಿತ ಮುಖ್ಯಮಂತ್ರಿ ವಿರುದ್ಧ ಪಾದಯಾತ್ರೆ ಮಾಡುವ ನೈತಿಕ ಹಕ್ಕು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಇಲ್ಲ. ಸ್ವಯಂ ಘೋಷಿತ ನಾಯಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆ ಜನರು ಭಾಗವಹಿಸುತ್ತಿಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಪಾದಯಾತ್ರೆ ಹೆಸರಲ್ಲಿ ನಡೆಸುತ್ತಿರುವ ಡೋಂಗಿ ನಾಟಕ ಬಿಡಬೇಕು’ ಎಂದು ಒತ್ತಾಯಿಸಿದರು.

‘ಸಿದ್ದರಾಮಯ್ಯ ತಮ್ಮ ಕೃಷಿ ಭೂಮಿಯನ್ನು ಮುಡಾಗೆ ಕೊಟ್ಟಿದ್ದರಿಂದ ಅವರಿಗೆ ನಿವೇಶನ ದೊರೆತಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಅಕ್ರಮ ಆಸ್ತಿಗಳಿಸಿದ್ದಾರೆ. ಈ ಅಕ್ರಮ ಆಸ್ತಿ ಗಳಿಕೆ ಬಗ್ಗೆ ತನಿಖೆಯಾಗಬೇಕು. ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ನಾಯಕರು ಜೈಲು ಗಿರಾಕಿಗಳಾಗಿದ್ದು, ಬೇಲ್ ಮೇಲೆ ಹೊರಗೆ ಇದ್ದಾರೆ. ಅಹಿಂದ ವರ್ಗದ ಮುಖ್ಯಮಂತ್ರಿಯ ಆಡಳಿತ ಸಹಿಸಿಕೊಳ್ಳಲು ಸಾಧ್ಯವಾಗದೇ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಅಧಿಕಾರಕ್ಕೆ ಅಂಟಿಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿಯನ್ನು ಕುಂದಿಸಲು ಯಾರಿಗೂ ಸಾಧ್ಯವಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಭಾವಚಿತ್ರವನ್ನು ಪ್ರತಿಭಟನಕಾರರು ದಹನ ಮಾಡಿದರು. ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮುಖಂಡರಾದ ನಗರದ ಮಹಾದೇವಪ್ಪ, ಗೋಣಿ ಮಾಲತೇಶ್, ಪಾರಿವಾಳ ಶಿವರಾಮ್, ಎಚ್.ಎಸ್.ರವೀಂದ್ರ, ಎಸ್.ಪಿ.ಚಂದ್ರುಗೌಡ, ವೀರನಗೌಡ, ಭಂಡಾರಿ ಮಾಲತೇಶ್, ಶಿವ್ಯಾನಾಯ್ಕ, ರಾಘುನಾಯ್ಕ, ಉಳ್ಳಿ ದರ್ಶನ್, ಶ್ರೀಧರ ಕರ್ಕಿ, ಉಮೇಶ್ ಮಾರವಳ್ಳಿ, ನಗರದ ರವಿಕಿರಣ್, ಕಲ್ಮನೆ ಸುರೇಶ್, ಗಬ್ಬೂರು ನಾಗರಾಜ್, ಸ.ನ.ಮಂಜಪ್ಪ, ವೀರೇಶ್ ಜೋಗಿಹಳ್ಳಿ, ಬಡಗಿ ಫಾಲಾಕ್ಷ, ಯು.ಬಿ.ವಿಜಯ್, ಜಗದೀಶ್, ಗಜೇಂದ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT