ಶಿವಮೊಗ್ಗ: ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆಶುಕ್ರವಾರ ಪ್ರತಿಭಟನೆ ನಡೆಸಿದರು.

ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.ಕೊರೊನಾನಾ ನಿಯಂತ್ರಣಕ್ಕೆ ಒತ್ತಾಯಿಸಿದರು.ವ್ಯಾಪಕ ಭ್ರಷ್ಟಾಚಾರ ಖಂಡಿಸಿದರು.ಅತಿವೃಷ್ಟಿ ಪರಿಹಾರಕ್ಕೆ, ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣ ತನಿಖೆಗೆ ಆಗ್ರಹಿಸಿದರು.

ಪ್ರತಿಭಟನಾ ಸ್ಥಳದಲ್ಲೇಗಾಂಧಿಜಯಂತಿ ಆಚರಿಸಿದರು. ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ. ಅಲ್ಲಿನ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದುದೂರಿದರು.

ಕೇಂದ್ರ, ರಾಜ್ಯ ಸರ್ಕಾರಗಳು ಜನವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೆ ತಂದಿವೆ.ಕೊರೊನಾ ನಿಯಂತ್ರಣಕ್ಕಾಗಿ ಖರೀದಿಸಿದ ಪರಿಕರಗಳಲ್ಲೂಬ್ರಹ್ಮಾಂಡ ಭ್ರಷ್ಟಾಚಾರನಡೆದಿದೆ. ಈ ಹಗರಣ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಕೊರೊನಾ ಸಂಕಷ್ಟದ ಸ್ಥಿತಿಯಲ್ಲಿ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಬೇಕು. ಅತಿವೃಷ್ಟಿ ನಿರ್ವಹಣೆಯ ಲೆಕ್ಕ ಕೊಡಬೇಕು. ಇಲ್ಲದಿದ್ದರೆಜನವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆಯಲಾಗುವುದು ಎಂದು ಪಣತೊಟ್ಟರು.

ಕಾಂಗ್ರೆಸ್ ಜಿಲ್ಲಾ ಘಟಕದಅಧ್ಯಕ್ಷ ಎಚ್.ಎಸ್.ಸುಂದರೇಶ್,ವಿಧಾನ ಪರಿಷತ್ ಸದಸ್ಯಆರ್.ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಮಹಿಳಾಘಟಕದ ಅಧ್ಯಕ್ಷೆ ಅನಿತಾ ಕುಮಾರಿ,ಪಾಲಿಕೆ ಸದಸ್ಯರಾದಎಚ್.ಸಿ.ಯೋಗೀಶ್, ಯಮುನಾ ರಂಗೇಗೌಡ,ಮೆಹಕ್ ಷರೀಪ್, ರೇಖಾ ರಂಗನಾಥ್, ರಮೇಶ್ ಹೆಗ್ಡೆ, ಮುಖಂಡರಾದ ಎನ್.ರಮೇಶ್, ವೈ.ಎಚ್.ನಾಗರಾಜ್, ಎಸ್.ಪಿ. ಶೇಷಾದ್ರಿ, ಎಲ್.ರಾಮೇಗೌಡ, ಪಂಡಿತ್ ವಿಶ್ವನಾಥ್, ಗಿರೀಶ್, ಕೆ.ರಂಗನಾಥ್, ಸಿ.ಎಸ್.ಚಂದ್ರಭೂಪಾಲ್, ಚಂದನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.