ಸೊರಬ: ರಾಜ್ಯಪಾಲರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಬಂಗಾರಧಾಮದಿಂದ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಣತಿಯಂತೆ ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಿ ಕರ್ನಾಟಕದ ಜನರಿಗೆ ದ್ರೋಹ ಬಗೆಯುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ, ಆನವಟ್ಟಿ ಘಟಕದ ಅಧ್ಯಕ್ಷ ಸದಾನಂದಗೌಡ, ಪ್ರಮುಖರಾದ ಎಚ್.ಗಣಪತಿ, ಎಂ.ಡಿ.ಶೇಖರ್, ಕೆ.ಮಂಜುನಾಥ್ ಹಳೇಸೊರಬ, ಶ್ರೀಕಾಂತ್ ಚಿಕ್ಕಶಕುನ, ನೆಹರೂ ಕೊಡಕಣಿ, ರೇವಣಪ್ಪ ಟಿಜಿಕೊಪ್ಪ, ರಶೀದ್, ಜೈಶೀಲಪ್ಪ, ತಬಲಿ ಬಂಗಾರಪ್ಪ, ನಾಗರಾಜ್ ಚಿಕ್ಕಸವಿ, ಪ್ರೇಮಾ ಟೋಕಪ್ಪ, ಅನ್ಸರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.