ಶುಕ್ರವಾರ, ಜುಲೈ 1, 2022
27 °C
ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಅವೈಜ್ಞಾನಿಕ ಆರೋಪ

ರಸ್ತೆ ತಡೆದು ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಕುವೆಂಪು ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕಾಮಗಾರಿಯಲ್ಲಿ ಶೇ 40ರಷ್ಟು ಕಮಿಷನ್ ಪಡೆಯಲಾಗಿದೆ. ಪಾಲಿಕೆಯಾಗಲೀ, ಜಿಲ್ಲಾಡಳಿತವಾಗಲೀ ಕಾಮಗಾರಿ ನಡೆಸುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಮಾತನಾಡಿ, ‘ಸ್ಮಾರ್ಟ್‌ ಸಿಟಿಯ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಇಡೀ ನಗರವೇ ಹಾಳಾಗಿದೆ. ಕಳೆದ ಒಂದೆರಡು ದಿನಗಳಲ್ಲಿ ಬಿದ್ದ ಭಾರಿ ಮಳೆಯಿಂದ ಬಡವರ ಬದುಕು ಮೂರಾಬಟ್ಟೆಯಾಗಿದೆ. ರಾಜಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದು, ನೀರು ತಗ್ಗುಪ್ರದೇಶದಲ್ಲಿನ ಮನೆಗಳಿಗೆ ನುಗ್ಗಿದೆ. ಚರಂಡಿಗೆ ನೀರು ಸರಾಗವಾಗಿ ಸಾಗದೆ ರಸ್ತೆ ಮೇಲೆ ನೀರು ಹರಿದಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ನೀರುಪಾಲಾಗಿವೆ. ಇದಕ್ಕೆಲ್ಲಾ ಸ್ಮಾರ್ಟ್‌ ಸಿಟಿ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ. ಅಧಿಕಾರಿಗಳು ಮತ್ತು ಆಡಳಿತ ಪಕ್ಷದವರು ಸೇರಿಕೊಂಡು ಭಾರೀ ಲೂಟಿ ಮಾಡಿದ್ದಾರೆ’ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯೆ ರೇಖಾ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಪಿ. ಗಿರೀಶ್, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಎಲ್. ರಾಮೇಗೌಡ, ಕೆ. ರಂಗನಾಥ್, ಕೆ. ದೇವೇಂದ್ರಪ್ಪ, ಶಿವಾನಂದ್, ವಾಹಿದ್ ಅಡ್ಡು, ಕೆ. ಚೇತನ್, ಎಸ್.ಪಿ. ಶೇಷಾದ್ರಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು