ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಆರೈಕೆ ಕೇಂದ್ರಗಳ ಅವ್ಯವಸ್ಥೆಗೆ ಕಾಂಗ್ರೆಸ್ ಖಂಡನೆ

Last Updated 31 ಜುಲೈ 2020, 12:05 IST
ಅಕ್ಷರ ಗಾತ್ರ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿಕೋವಿಡ್‌ ರೋಗಿಗಳಿಗೆಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರಜಿಲ್ಲಾಧಿಕಾರಿ ಕಚೇರಿಮುಂದೆಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಸಂಖ್ಯೆಗೆ ಸರಿಯಾಗಿ ಆರೈಕೆ ಕೇಂದ್ರಗಳ ಸ್ಥಾಪನೆ ಮಾಡುತ್ತಿಲ್ಲ. ಜಿಲ್ಲೆಯ ಪ್ರಮುಖ ಆರೈಕೆ ಕೇಂದ್ರಮೆಗ್ಗಾನ್ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಸಾವಿನ ಪ್ರಕರಣಗಳಲ್ಲೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲ, ಆಕ್ಸಿಜನ್, ಮಾಸ್ಕ್, ಸ್ಯಾನಿಟೈಜರ್ ಇಲ್ಲ. ವೈದ್ಯರು, ಶುಶ್ರೂಷಕಿಯರ ಕೊರತೆ ಇದೆಎಂದು ದೂರಿದರು.

ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.ಖಾಸಗಿ ಆಸ್ಪತ್ರೆಗಳ ಮೇಲೆ ಸರ್ಕಾರ ನಿಯಂತ್ರಣಕಳೆದುಕೊಂಡಿದೆ. ಕೊರೊನಾ ಸೋಂಕಿನ ಪರೀಕ್ಷೆಯೂ ವಿಳಂಬವಾಗುತ್ತಿದೆ. ಗಂಟಲು ದ್ರವ ಪರೀಕ್ಷೆಯ ವರದಿಎರಡು ಮೂರು ದಿನಗಳಾದರೂ ಬರುವುದಿಲ್ಲ. ಕೋವಿಡ್ ನೆಪದಲ್ಲಿ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆಗೆಬರುವ ವೃದ್ದರು, ಹೊರರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಅವ್ಯವಸ್ಥೆಗೆ ರಾಜ್ಯಸರ್ಕಾರವೇಹೊಣೆ ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾ ಹೇಳಿಕೆಯಲ್ಲಿಯೇ ಮುಳುಗಿದ್ದಾರೆ. ಜಿಲ್ಲೆ ಮರೆತಿದ್ದಾರೆ. ಮುಖ್ಯಮಂತ್ರಿ ನಿಗಮ, ಮಂಡಳಿಗಳನೇಮಕ ಪ್ರಕ್ರಿಯೆಯಲ್ಲಿ ತಲ್ಲಿನರಾಗಿದ್ದಾರೆ.ಒಮ್ಮೆಯಾದರೂಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಗಮನ ಹರಿಸಿಲ್ಲ. ಈಗಲಾದರೂಕೋವಿಡ್ ಆರೈಕೆ ಕೇಂದ್ರಗಳ ಸಂಖ್ಯೆ ಹೆಚ್ಚಿಸಬೇಕು. ಹೆಚ್ಚಿನರೋಗ ಲಕ್ಷಣ, ರೋಗ ಲಕ್ಷಣ ಇಲ್ಲದವರಿಗೆ ಪ್ರತ್ಯೇಕ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಬೇಕು. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ತಕ್ಷಣವೇ ವೈದ್ಯರು, ಸಿಬ್ಬಂದಿ ನೇಮಿಸಬೇಕು.ರೋಗಿಗಳ ಪರದಾಟ ತಪ್ಪಿಸಲು ಪ್ರತ್ಯೇಕ ಕಟ್ಟಡಗಳನ್ನು ಗುರುತಿಸಬೇಕು. ವೈರಸ್‌ ಹತೋಟಿಗೆ ತರಲು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್,ಮಾಜಿ ಶಾಸಕಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಎಚ್.ಸಿ.ಯೋಗೀಶ್, ಎನ್.ರಮೇಶ್, ಪಂಡಿತ್ ವಿ.ವಿಶ್ವನಾಥ್, ವೈ.ಎಚ್.ನಾಗರಾಜ್, ಕೆ.ರಂಗನಾಥ್, ಸೌಂಗಂಧಿಕಾ, ಚೇತನ್, ಸಿ.ಜಿ.ಮಧುಸೂದನ್, ಎಚ್.ಪಿ.ಗಿರೀಶ್, ರವಿಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT