ಮಂಗಳವಾರ, ಜೂನ್ 22, 2021
22 °C

ಭದ್ರಾವತಿ ನಗರಸಭೆ, ತೀರ್ಥಹಳ್ಳಿಯ ಪ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭದ್ರಾವತಿ ನಗರಸಭೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಮೊಳಗಿಸಿದೆ.

ಭದ್ರಾವತಿ ನಗರಸಭೆಯ 34 ಸ್ಥಾನಗಳಲ್ಲಿ ಕಾಂಗ್ರೆಸ್‌ 18, ಜೆಡಿಎಸ್‌ 11, ಬಿಜೆಪಿ 4 ಹಾಗೂ ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಚುನಾವಣೆ ಘೋಷಣೆಗೂ ಮೊದಲು ನಡೆದಿದ್ದ ಕಬಡ್ಡಿ ಪಂದ್ಯಾವಳಿಯ ಗಲಾಟೆಯ ನಂತರ ಬಿಜೆಪಿಗೆ ಪರಿಸ್ಥಿತಿ ಅನುಕೂಲಕರವಾಗಿತ್ತು. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿತ್ತು.

ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲೆಯಲ್ಲಿ ದೊಡ್ಡ ಆಂದೋಲನವನ್ನೇ ನಡೆಸಿತ್ತು. ಹಾಗಾಗಿ, ನಗರಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು. ಕೊನೆಗೂ ಮತದಾರರು ಕಾಂಗ್ರೆಸ್‌ ಬೆಂಬಲಿಸಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 6 ಸ್ಥಾನ ಗಳಿಸಿವೆ. ಆ ಮೂಲಕ ಎರಡೂವರೆ ದಶಕಗಳ ಬಿಜೆಪಿ ಅಧಿಪತ್ಯ ಅಂತ್ಯಗೊಂಡಿದೆ. ಜೆಡಿಎಸ್‌ ತೊರೆದು ಈಚೆಗೆ ಕಾಂಗ್ರೆಸ್‌ ಸೇರಿದ ಸಹಕಾರಿ ಧುರೀಣ ಆರ್.ಎಂ.ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ ಅವರ ಒಗ್ಗಟ್ಟು ಕಾಂಗ್ರೆಸ್‌ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು