ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ವಿರುದ್ಧದ ಪ್ರಕರಣದ ಹಿಂದೆ ಷಡ್ಯಂತ್ರ ಅಡಗಿದೆ: ಕೆ.ಎಸ್.ಈಶ್ವರಪ್ಪ

Published 15 ಮಾರ್ಚ್ 2024, 11:48 IST
Last Updated 15 ಮಾರ್ಚ್ 2024, 11:48 IST
ಅಕ್ಷರ ಗಾತ್ರ

ಶಿವಮೊಗ್ಗ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿಂದೆ ಷಡ್ಯಂತ್ರ ಅಡಗಿದೆ. ಅವರನ್ನು ಹಣಿಯಲು ಯಾರೋ ಮಾಡಿರುವ ತಂತ್ರವಿದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ವಿರುದ್ಧ ಬೆಂಗಳೂರಿನಲ್ಲಿ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿರುವ ವಿಚಾರ ನನ್ನ ಕಿವಿಗೂ ಬಿದ್ದಿದೆ. ನನಗೆ ಚೆನ್ನಾಗಿ ಗೊತ್ತಿದೆ. ಅವರನ್ನು ಬಹಳ ಹಿಂದಿನಿಂದಲೂ ನೋಡಿಕೊಂಡು ಬಂದಿದ್ದೇನೆ. ಅವರ ಸ್ವಭಾವದ ಬಗ್ಗೆ ನನಗೆ ಗೊತ್ತಿದೆ. ಇದೊಂದು ಷಡ್ಯಂತ್ರ ಅಷ್ಟೆ ಹೊರತಾಗಿ ಮತ್ತೇನು ಅಲ್ಲ.

ಈ ಆರೋಪದಿಂದ ಯಡಿಯೂರಪ್ಪ ಮುಕ್ತರಾಗಿ ಹೊರಗೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT