ಸಾಗರ: ‘ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ (ಎಂಡಿಎಫ್) ಮಾಜಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ನಿಸರಾಣಿ ಅವರು ನನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ’ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಆರೋಪಿಸಿದ್ದಾರೆ.

‘ಎಂಡಿಎಫ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ವಿವಾದ ಉಂಟಾದ ಬೆನ್ನಲ್ಲೇ ತಮ್ಮ ಪತ್ನಿ ಮೇಲೆ ನಾನು ಅತ್ಯಾಚಾರ ನಡೆಸಲು ಮುಂದಾಗಿದ್ದೇನೆ ಎಂದು ದೂರು ಕೊಡಲು ಶ್ರೀಪಾದ ಹೆಗಡೆ ಮುಂದಾಗಿದ್ದರು. ಆದರೆ, ಕೆಲವರು ಬುದ್ಧಿವಾದ ಹೇಳಿದ್ದರಿಂದ ದೂರು ನೀಡುವುದರಿಂದ ಹಿಂದೆ ಸರಿದಿದ್ದಾರೆ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಈ ಹಿಂದೆಯೂ ನನ್ನನ್ನು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿತ್ತು. ಈಗ ಮುಂದಿನ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೊಮ್ಮೆ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ. ನಾನು ಶಾಸಕನಾಗಿ ಯಾರ ವಿರುದ್ಧವೂ ಈವರೆಗೂ ಸುಳ್ಳು ಪ್ರಕರಣ ದಾಖಲಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.