ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯಲು ಕಲುಷಿತ ನೀರು ಪೂರೈಕೆ ಆರೋಪ

ಕಲ್ಲಗಂಗೂರು ಗ್ರಾಮದ ನಿವಾಸಿಗಳಿಂದ ಪ್ರತಿಭಟನೆ
Last Updated 6 ಡಿಸೆಂಬರ್ 2022, 4:11 IST
ಅಕ್ಷರ ಗಾತ್ರ

ಶಿವಮೊಗ್ಗ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಕಲ್ಲಗಂಗೂರು ಗ್ರಾಮದ ಸಿದ್ದರಾಮೇಶ್ವರ ಮಹಿಳಾ ಭೋವಿ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಸೋಮವಾರ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಿಇಒಗೆ ಮನವಿ ಸಲ್ಲಿಸಿದರು.

ಕಲ್ಲಗಂಗೂರು ಗ್ರಾಮದಲ್ಲಿ ಹಲವು ದಿನಗಳಿಂದ ಕುಡಿಯಲು ಕಲುಷಿತ ನೀರು ಪೂರೈಕೆ ಆಗುತ್ತಿದೆ. ಈ ನೀರನ್ನು ಕುಡಿದ ಹಲವರಿಗೆ ಆರೋಗ್ಯದಲ್ಲಿ ಸಮಸ್ಯೆ ಬರುತ್ತಿದ್ದು, ದಿನನಿತ್ಯ ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಮಕ್ಕಳಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಶಾಲೆಗೆ ಹೋಗಲು ಆಗುತ್ತಿಲ್ಲ ವೃದ್ಧರು ಕೂಡ ನರಳಾಡುವಂತಾಗಿದೆ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕಲ್ಲಗಂಗೂರು ಗ್ರಾಮ ನಗರಕ್ಕೆ ಅಂಟಿಕೊಂಡಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ. ಇದರಿಂದ ಕೆಲಸಕ್ಕೆಂದು ಶಿವಮೊಗ್ಗಕ್ಕೆ ಬರುವ ಕಾರ್ಮಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಈ ತೊಂದರೆ ಕೂಡ ಶೀಘ್ರ ಸರಿಪಡಿಸಿ ಸಾರಿಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಮಹಿಳಾ ಭೋವಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಬಿ. ವಿಜಯ, ಪದಾಧಿಕಾರಿಗಳಾದ ರೂಪಾ, ಶಾಂತಾ, ಅನಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT