18 ಜನರಿಗೆ ಕೊರೊನಾ 20 ಮಂದಿ ಗುಣಮುಖ
ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ 18 ಜನರಿಗೆ ಕೊರೊನಾ ದೃಢಪಟ್ಟಿದ್ದು, 20 ಮಂದಿ ಗುಣಮುಖರಾಗಿದ್ದಾರೆ.
1699 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 1526 ಮಂದಿಯ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 61 ಸೇರಿ ಒಟ್ಟು 137 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 348ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 21,531ಕ್ಕೆ ತಲುಪಿದೆ. ಈವರೆಗೆ 20,609 ಮಂದಿ ಗುಣಮುಖರಾಗಿದ್ದಾರೆ.
ಶಿವಮೊಗ್ಗ ತಾಲ್ಲೂಕಿನಲ್ಲಿ 8, ಭದ್ರಾವತಿಯಲ್ಲಿ 4, ಶಿಕಾರಿಪುರ 2, ಸೊರಬದಲ್ಲಿ 1, ಸಾಗರದಲ್ಲಿ ಮೂರು ಜನರಿಗೆ ಕೊರೊನಾ ಸೋಂಕು ತಗುಲಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.