ಶನಿವಾರ, ಅಕ್ಟೋಬರ್ 24, 2020
27 °C

ಕೊರೊನಾ: 265 ಸೋಂಕಿತರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ 265 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 170 ಮಂದಿಗೆ ಸೋಂಕು ದೃಢಪಟ್ಟಿದ್ದಾರೆ. ಮೂವರು ಮೃತಪಟ್ಟಿದ್ದಾರೆ.

ಒಂದೇ ದಿನ 3,814 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. 2,869 ಜನರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 1,418 ಸೇರಿ ಒಟ್ಟು 1859 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 315ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 18,844ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 58 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 24, ಶಿಕಾರಿಪುರದಲ್ಲಿ 19, ತೀರ್ಥಹಳ್ಳಿಯಲ್ಲಿ 16, ಸೊರಬದಲ್ಲಿ 8, ಸಾಗರದಲ್ಲಿ 13, ಹೊಸನಗರದಲ್ಲಿ 31 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದ ಒಬ್ಬರಲ್ಲಿ ಸೋಂಕು ಖಚಿತಪಟ್ಟಿದೆ.

13 ಜನರಿಗೆ ಪಾಸಿಟಿವ್ (ಸಾಗರ ವರದಿ): ತಾಲ್ಲೂಕಿನಲ್ಲಿ ಶುಕ್ರವಾರ 13 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗ್ರಾಮಾಂತರದಲ್ಲಿ 9 ನಗರ ವ್ಯಾಪ್ತಿಯಲ್ಲಿ 4 ಪ್ರಕರಣ ದಾಖಲಾಗಿದೆ. ಶ್ರೀಧರ ನಗರ ಬಡಾವಣೆಯ 58 ವರ್ಷದ ಪುರುಷ ಕೊರೊನಾದಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 31 ಕ್ಕೆ ಏರಿದೆ. ಒಟ್ಟು ಸೋಂಕಿತರ ಸಂಖ್ಯೆ 849. ಗುಣಮುಖರಾದವರು 596 ಮಂದಿ. 222 ಮಂದಿ ಚಿಕಿತ್ಸೆಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.