ಶನಿವಾರ, ಜೂಲೈ 4, 2020
27 °C

ಮಹಾರಾಷ್ಟ್ರದಿಂದ ಬಂದ ಇಬ್ಬರಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮಹಾರಾಷ್ಟ್ರದಿಂದ ಬಂದಿದ್ದ ಇಬ್ಬರಿಗೆ ಕೊರೊನಾ ಸೋಂಕು ಇರುವುದು ಬುಧವಾರ ದೃಢಪಟ್ಟಿದೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ 22 ವರ್ಷದ ಪುರುಷ (ಪಿ–3911) ಒಂದು ವರ್ಷದ ಮಗು (ಪಿ–3910) ಕೋವಿಡ್‌ನಿಂದ ಬಳಲುತ್ತಿದ್ದಾರೆ. ಮೇ 26ರಂದು ಮಹಾರಾಷ್ಟ್ರದಿಂದ ಬಂದಿದ್ದ ಅವರನ್ನು ಬೈಪಾಸ್ ಬಳಿಯ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.  

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಬುಧವಾರ ನಾಲ್ವರು ಗುಣಮುಖರಾಗಿದ್ದು, ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದ 30 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 23 ಜನರು ಮೆಗ್ಗಾನ್‌ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲ್ಲು ತೂರಾಟ: ಪಂಜಾಬ್‌ನಿಂದ ಬಂದ ಹಕ್ಕಿಪಿಕ್ಕಿ ಕ್ಯಾಂಪ್‌ನ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ, ಹಸೂಡಿ ಹಕ್ಕಿಪಿಕ್ಕಿ ಕ್ಯಾಂಪ್, ಹರಪನಹಳ್ಳಿ ಕ್ಯಾಂಪ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿತ್ತು. ಈ ಸಮಯದಲ್ಲಿ ಕೆಲವರಿಗೆ ಅಗತ್ಯ ಆಹಾರ ಸಿಗದ ಕಾರಣ ಸೀಲ್‌ಡೌನ್ ಉಲ್ಲಂಘಿಸಿ ಊರಿನಿಂದ ಹೊರಗೆ ಬಂದಿದ್ದರು. ಇದನ್ನು ಗಮನಿಸಿದ ಚಿಕ್ಕಮರಡಿ ಗ್ರಾಮಸ್ಥರು ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.