ಶುಕ್ರವಾರ, ಡಿಸೆಂಬರ್ 4, 2020
25 °C

ಶಿವಮೊಗ್ಗ: ಒಂದೇ ದಿನ 56 ಮಂದಿ ಗುಣಮುಖ, 33 ಜನರಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 2,561 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. 2,178 ಜನರ ವರದಿ ನೆಗೆಟಿವ್ ಬಂದಿದೆ. 56 ಜನರು ಗುಣಮುಖರಾಗಿದ್ದಾರೆ. 33 ಮಂದಿಗೆ ಸೋಂಕು ದೃಢಪಟ್ಟಿದೆ.

ಮನೆಯಲ್ಲಿ 145 ಸೇರಿ ಒಟ್ಟು 250 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 347ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 20,991ಕ್ಕೆ ತಲುಪಿದೆ. ಈವರೆಗೆ 19,932 ಮಂದಿ ಗುಣಮುಖರಾಗಿದ್ದಾರೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 10, ಭದ್ರಾವತಿಯಲ್ಲಿ 7, ಶಿಕಾರಿಪುರದಲ್ಲಿ 8, ತೀರ್ಥಹಳ್ಳಿಯಲ್ಲಿ ಒಬ್ಬರು, ಸೊರಬದಲ್ಲಿ ಇಬ್ಬರು, ಸಾಗರದಲ್ಲಿ ಮೂವರು, ಹೊಸನಗರದಲ್ಲಿ ಇಬ್ಬರಿಗೆ ಸೋಂಕು ತಗುಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.