ಭಾನುವಾರ, ಅಕ್ಟೋಬರ್ 25, 2020
27 °C

ಸರಳ ದಸರಾ; ಕೊರೊನಾ ವಾರಿಯರ್‌ಗಳಿಂದ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೋವಿಡ್‌ ಕಾರಣದಿಂದ ಈ ಬಾರಿ ದಸರಾ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ನಗರ ಪಾಲಿಕೆ ನಿರ್ಧರಿಸಿದೆ.

ಕೋಟೆ ರಸ್ತೆಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.17ರಂದು ತಾಯಿ ಚಾಮುಂಡೇಶ್ವರಿ ದೇವಿಯನ್ನು ಪಟ್ಟಕ್ಕೆ ಕೂರಿಸಲಾಗುವುದು. ಪೌರ ಕಾರ್ಮಿಕರು, ಆರೋಗ್ಯ ಇಲಾಖೆಯ ವೈದ್ಯರು, ಶುಶ್ರೂಷಕಿಯರು ಒಳಚರಂಡಿ ಸಿಬ್ಬಂದಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು ಎಂದು ಮೇಯರ್ ಸುವರ್ಣಾ ಶಂಕರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಈ ಬಾರಿ ಎರಡು ಸಮಿತಿಗಳನ್ನು ರಚಿಸಲಾಗಿದೆ. ಒಂದು ಸ್ವಾಗತ ಸಮಿತಿ ಮತ್ತೊಂದು ಉತ್ಸವ ಸಮಿತಿ. ಈ ಸಮಿತಿಗೆ ಮೇಯರ್, ಅಲಂಕಾರ ಸಮಿತಿಗೆ ವಿರೋಧ ಪಕ್ಷದ ನಾಯಕ ಎಚ್‌.ಸಿ.ಯೋಗೀಶ್ ಅಧ್ಯಕ್ಷರಾಗಿರುತ್ತಾರೆ. ಪಾಲಿಕೆಯ ಎಲ್ಲ ಸದಸ್ಯರುಗಳು ಈ ಸಮಿತಿಗಳ ಸದಸ್ಯರಾಗಿರುತ್ತಾರೆ ಎಂದರು.

26ರಂದು ವಿಜಯದಶಮಿ ಮೆರವಣಿಗೆ ಇರುವುದಿಲ್ಲ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ದೇವರು ಬನ್ನಿ ಮುಡಿಯುವ ಸ್ಥಳ ಹಳೇ ಜೈಲು ಆವರಣಕ್ಕೆ ನೇರವಾಗಿ ಕರೆ ತರುವಂತೆ ಮನವಿ ಮಾಡಲಾಗಿದೆ. ಖಾಸಗಿ ದೇವಾಲಯಗಳ ಈ ಬಾರಿ ಬನ್ನಿ ಮುಡಿಯವ ಸ್ಥಳಕ್ಕೆ ಬರುವುದಿಲ್ಲ ಎಂದರು.

ಪ್ರತಿ ವರ್ಷದಂತೆ ಎಲ್ಲ ದೇವಸ್ಥಾನಗಳ ಅಲಂಕಾರಕ್ಕಾಗಿ ಪಾಲಿಕೆಯಿಂದ ಧನಸಹಾಯ ನೀಡಲಾಗುವುದು. ನಗರದ ಎಲ್ಲೆಡೆ  ದೀಪಾಲಂಕಾರ ಮಾಡಲಾಗುವುದು. ಸಾರ್ವಜನಿಕರಿಗೆ ಬನ್ನಿ ಮುಡಿಯುವ ಸ್ಥಳಕ್ಕೆ ಪ್ರವೇಶ ಇಲ್ಲ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ದಸರಾ ಆಚರಣೆಗೆ ₹ 1.63 ಕೋಟಿ  ವೆಚ್ಚ ಮಾಡಲಾಗಿತ್ತು. ಈ ಬಾರಿ ₹ 38 ಲಕ್ಷ ತೆಗೆದಿರಿಸಲಾಗಿದೆ. ಮಿತ ವ್ಯಯದಲ್ಲೇ ಎಲ್ಲಕಾರ್ಯಕ್ರಮ ನೆರವೇರಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪ ಮೇಯರ್ ಸುರೇಖಾ ಮುರಳೀಧರ್, ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಎಸ್.ಜ್ಞಾನೇಶ್ವರ್, ಇ.ವಿಶ್ವಾಸ್, ಯು.ಎಚ್.ವಿಶ್ವನಾಥ್, ಕೆ.ಟಿ.ಶ್ರೀನಿವಾಸ್, ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.