ಮಂಗಳವಾರ, ಜನವರಿ 18, 2022
15 °C
ಜಿಲ್ಲೆಯಲ್ಲಿ ಒಂದೇ ದಿನ ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಶಿವಮೊಗ್ಗ | ಜಿಲ್ಲೆಯಲ್ಲಿ ದ್ವಿಶತಕ ದಾಟಿದ ಕೊರೊನಾ ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶುಕ್ರವಾರ ಅರ್ಧ ಶತಕ ಸಂಖ್ಯೆಯಲ್ಲಿದ್ದ ಸೋಂಕಿತರ ಸಂಖ್ಯೆ ಶನಿವಾರ ಶತಕ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ದ್ವಿಶತಕ ಮೀರಿದೆ.

ಕೊರೊನಾ ಎರಡನೆ ಅಲೆ ನಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಎರಡಂಕಿ ದಾಟಿರಲಿಲ್ಲ. ಕಳೆದ ನಾಲ್ಕೈದು ದಿನಗಳಿಂದ ಎರಡಂಕಿ ಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಶನಿವಾರ ದಿಢೀರನೇ ಮೂರಂಕಿ ದಾಟಿದ್ದು, 116 ಮಂದಿಗೆ ಸೋಂಕು ತಗುಲಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಂದಿಗೆ (89) ಸೋಂಕು ತಗುಲಿದೆ. ಭದ್ರಾವತಿಯಲ್ಲಿ 12, ಶಿಕಾರಿಪುರದಲ್ಲಿ 6, ಹೊಸನಗರದಲ್ಲಿ 3, ತೀರ್ಥಹಳ್ಳಿಯಲ್ಲಿ ಒಬ್ಬರು, ಸಾಗರದಲ್ಲಿ ಒಬ್ಬರು, ಸೊರಬದಲ್ಲಿ ಒಬ್ಬರು, ಇತರೆ ಜಿಲ್ಲೆಯಿಂದ ಬಂದ ಮೂವರಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 294ಕ್ಕೆ ಏರಿಕೆಯಾಗಿದೆ. ಈ ಪೈಕಿ 33 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 21 ಮಂದಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. 153 ಮಂದಿ ಹೋಂ ಐಸೊಲೇಷನ್‌ನಲ್ಲಿ ಇದ್ದಾರೆ. ಟ್ರಯೇಜ್’ನಲ್ಲಿ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.