ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಜಿಲ್ಲೆಗೂ ಬಂದ ಕೊರೊನಾ | ಅಹಮದಾಬಾದ್‌ನಿಂದ ಬಂದ 8 ಜನರಿಗೆ ಸೋಂಕು

Last Updated 10 ಮೇ 2020, 9:58 IST
ಅಕ್ಷರ ಗಾತ್ರ

ಶಿವಮೊಗ್ಗ: ಇದುವರೆಗೂ ಹಸಿರು ವಲಯದಲ್ಲೇ ಇದ್ದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆಮೊದಲ ಬಾರಿ ಕೊರೊನಾ ಪ್ರವೇಶಿಸಿದೆ.

ಗುಜರಾತ್‌ನ ಅಹಮದಾಬಾದ್‌ನಿಂದ ಜಿಲ್ಲೆಗೆ ಬಂದಿದ್ದ 8ಜನರಿಗೆಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.ಜಿಲ್ಲೆಗೆ ಮೂರು ದಿನಗಳಲ್ಲಿ 289 ಜನರು ಹೊರ ರಾಜ್ಯಗಳಿಂದ ಬಂದಿದ್ದರು. ಅಹಮದಾಬಾದ್‌ನಿಂದ ಬಂದಿದ್ದ 9 ಜನರ ಗಂಟಲು ದ್ರವದ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. 8 ಜನರಿಗೆ ಕೋವಿಡ್‌ ಇರುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

8ಜನರಲ್ಲಿ ಶಿಕಾರಿಪುರ ತಾಲ್ಲೂಕಿನ 7, ತೀರ್ಥಹಳ್ಳಿಯ ಒಬ್ಬರು ಇದ್ದಾರೆ.ಎಲ್ಲರಿಗೂ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಕೇಂದ್ರದ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅವರನ್ನು ಶನಿವಾರ ತಪಾಸಣೆ ನಡೆಸಿದ, ಹಾಸ್ಟಲ್‌ ಕ್ವಾರಂಟೈನ್‌ಗೆ ಬಿಟ್ಟು ಬಂದಿದ್ದ ಅಧಿಕಾರಿಗಳು, ಸಿಬ್ಬಂದಿಯನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ವಿವರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT