ಮೆಗ್ಗಾನ್ ಐಸಿಯು ಮರಣ ಪ್ರಮಾಣ ಹೆಚ್ಚಳ: ಸುಧಾಕರ್ ಕಳವಳ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಐಸಿಯು ವಾರ್ಡ್ ಮರಣ ಪ್ರಮಾಣ ಶೇ 50ಕ್ಕಿಂತ ಹೆಚ್ಚಿದೆ. ಸಾವಿನ ಪ್ರಮಾಣ ತಗ್ಗಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಸೂಚಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ನಂತರ ಅವರು ಮಾತನಾಡಿದರು.
ಕೋವಿಡ್ ಒಳರೋಗಿಗಳ ಸಾವಿನ ಪರಿಶೀಲನೆಗಾಗಿ ಬೆಂಗಳೂರಿನಿಂದ ತಜ್ಞರ ತಂಡ ಕಳುಹಿಸಲಾಗುವುದು. ಎಲ್ಲಾ ಐಸಿಯು ವಾರ್ಡ್‌ಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಬೇಕು. ಆಸ್ಪತ್ರೆಗಳಲ್ಲಿ ನೆಪಕ್ಕೆ ಬಯೊಮೆಟ್ರಿಕ್ ನೀಡಿ, ನಂತರ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ವೈದ್ಯರ ಕಳ್ಳಾಟ ತಡೆಗೆ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆಗಳಲ್ಲಿ ಜಿಯೋ ಫೆನ್ಸಿಂಗ್ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.
ವೈದ್ಯರಿಗೆ ಲಕ್ಷಾಂತರ ರೂಪಾಯಿ ವೇತನ ನೀಡಲಾಗುತ್ತಿದೆ. ಅಷ್ಟೊಂದು ಸೌಲಭ್ಯ ಪಡೆದ ನಂತರವೂ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವುದು ತಪ್ಪು. ಇದು ನೈತಿಕತೆಯ ಪ್ರಶ್ನೆ. ಜಿಯೋ ಫೆನ್ಸಿಂಗ್ ಸಿಮ್ ಅಳವಡಿಸಿದರೆ 100 ಮೀಟರ್ ಹೊರಹೋಗುವ ವೈದ್ಯರ ವಿವರ ದೊರಕಲಿದೆ. ಆಗ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸುಲಭವಾಗಲಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.