ಮಂಗಳವಾರ, ಅಕ್ಟೋಬರ್ 27, 2020
24 °C
258 ಮಂದಿಗೆ ಕೊರೊನಾ ಸೋಂಕು ದೃಢ, 196 ಮಂದಿ ಗುಣಮುಖ

ಕೊರೊನಾ: ಶಿವಮೊಗ್ಗ ಜಿಲ್ಲೆಯಲ್ಲಿ 3,714 ಜನರ ವರದಿ ನೆಗೆಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ:  ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 4356 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದ್ದು, 3,714 ಜನರ ವರದಿ ನೆಗೆಟಿವ್ ಬಂದಿದೆ. 258 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 196 ಮಂದಿ ಗುಣಮುಖರಾಗಿದ್ದಾರೆ. 

ಮನೆಯಲ್ಲಿ 1336 ಸೇರಿ ಒಟ್ಟು 1973 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೆ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 310ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 17,445ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 132 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 40, ಶಿಕಾರಿಪುರದಲ್ಲಿ 23, ತೀರ್ಥಹಳ್ಳಿಯಲ್ಲಿ 15, ಸೊರಬದಲ್ಲಿ 13, ಸಾಗರದಲ್ಲಿ 14, ಹೊಸನಗರದಲ್ಲಿ 14 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದ 7 ಜನರಲ್ಲಿ ಸೋಂಕು
ಖಚಿತಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು