ಶಿವಮೊಗ್ಗ: ಒಂದು ವಾರದಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯಂತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ.ಕೋವಿಡ್ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳನ್ನು ನಡೆಸುವ ಭರವಸೆಯೊಂದಿಗೆ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ, ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಲವು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಒಂದು ವಾರದ ಅವಧಿಯಲ್ಲಿ ಒಟ್ಟು 1016 ಉಲ್ಲಂಘನೆ ಪ್ರಕರಣಗಳಲ್ಲಿ ₹ 1.63 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಶೇ 1.1ರಷ್ಟು ಪಾಸಿಟಿವ್ ಪ್ರಕರಣ:ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಒಂದು ವಾರದ ಅವಧಿಯಲ್ಲಿ ತಪಾಸಣಾ ಪ್ರಮಾಣವನ್ನು ಹೆಚ್ಚಿಸಲಾಗಿದೆ.ಪ್ರಸ್ತುತ 2,200 ಮಂದಿಯ ಕೊರೊನಾ ತಪಾಸಣೆ ನಡೆಸಲಾಗುತ್ತಿದ್ದು, ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ನೆರೆಯ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ ಮಾತ್ರ ಕೊರೊನಾ ನಿಯಂತ್ರಣದಲ್ಲಿಡಬಹುದು. ಜನರುನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮೂಲಸೌಕರ್ಯ ಮೇಲ್ದರ್ಜೆಗೆ: ಪ್ರಸ್ತುತ ಕೋವಿಡ್ ಪ್ರಕರಣಗಳನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಸಜ್ಜಿತ ಐಸಿಯು, 11 ಸಾವಿರ ಕೆಎಲ್ ಆಕ್ಸಿಜನ್ ಘಟಕ ಮಾತ್ರವಲ್ಲದೆ ಹೆಚ್ಚುವರಿಯಾಗಿ 6 ಸಾವಿರ ಕೆಎಲ್ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಬಸ್ ನಿಲ್ದಾಣ, ರೈಲು ನಿಲ್ದಾಣ, ಎಪಿಎಂಸಿಯಂತಹ ಸ್ಥಳಗಳಲ್ಲಿ ರ್ಯಾಂಡಮ್ ಆಗಿ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಲಸಿಕೆ ಕಾರ್ಯಕ್ರಮ: ಜಿಲ್ಲೆಯಲ್ಲಿ ಇದುವರೆಗೆ 18,041 (ಶೇ 85) ಆರೋಗ್ಯ ಕಾರ್ಯಕರ್ತೆಯರಿಗೆ ಪ್ರಥಮ ಡೋಸ್ ಹಾಗೂ ಶೇ 53ರಷ್ಟು ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಶೇ 63ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್, 60 ವರ್ಷ ಮೇಲ್ಪಟ್ಟ 58,814 ಮಂದಿಗೆ ಹಾಗೂ 45 ವರ್ಷ ಮೇಲ್ಪಟ್ಟ 1,470 ಮಂದಿಗೆ ಲಸಿಕೆ ನೀಡಲಾಗಿದೆ.

ಜಿಲ್ಲೆಗೆ 11,560 ಕೋವ್ಯಾಕ್ಸಿನ್ ಸರಬರಾಜಾಗಿದ್ದು, 4,200 ಖರ್ಚಾಗಿದೆ. 1,28,000 ಕೋವಿಶೀಲ್ಡ್ ಪೂರೈಕೆಯಾಗಿದ್ದು, 91,904 ಬಳಕೆಯಾಗಿದೆ. ಒಟ್ಟು 173 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಉಪಕೇಂದ್ರಗಳು, ಪಿಎಚ್ಸಿ, ಸಿಎಚ್ಸಿ, ತಾಲ್ಲೂಕು ಆಸ್ಪತ್ರೆ, ಸಿಮ್ಸ್, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಮ್ಮ ಗುರುತಿನ ಚೀಟಿಯೊಂದಿಗೆ ತೆರಳಿ ಲಸಿಕೆ ಪಡೆದುಕೊಳ್ಳಬೇಕು ಎಂದು ಡಿಸಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯಿತಿ ಎಂ.ಎಲ್. ವೈಶಾಲಿ, ಜಿಲ್ಲಾಧಿಕಾರಿ ಜಿ. ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.