ಶಿವಮೊಗ್ಗ: ಗೋವುಗಳ ಕಳವು, ಐವರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ಕು ಗೋವುಗಳನ್ನು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದವರನ್ನು ಶನಿವಾರ ಬಂಧಿಸಲಾಗಿದೆ.
ಶಿವಮೊಗ್ಗ ಟಿಪ್ಪು ನಗರದ ಅಮಾನುಲ್ಲಾ, ಸೈಯದ್ ದಸ್ತಗಿರ್, ತುಂಗಾ ನಗರದ ಸಿಕಂದರ್, ಹಾರ್ನಳ್ಳಿಯ ಮಹ್ಮದ್, ಮಂಗಳೂರಿನ ಫೈಜಲ್ ಬಂಧಿತರು.
ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ನಡೆದ ಗೋವುಗಳ ಕಳ್ಳತನ ಪ್ರಕರಣದಲ್ಲಿ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ.
ಡಿವೈಎಸ್‌ಪಿ ವಿನಾಯಕ ಎನ್.ಶೆಟಗೇರ್, ನಗರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್, ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಗಿರೀಶ್, ಕಾರ್ಗಲ್ ಠಾಣೆ ಸಬ್ ಇನ್‌ಸ್ಪೆಕ್ಟರ್ ತಿರುಮಲೇಶ್, ಸಿಬ್ಬಂದಿ ಮಹ್ಮದ್ ಅಲಿ, ಸಂತೋಷ್ ನಾಯ್ಕ್, ಅಶೋಕ್, ತಾರಾನಾಥ್, ರಘು, ಶ್ರೀಧರ್, ಮಲ್ಲೇಶ್ ಹಾಗೂ ಸಿಬ್ಬಂದಿ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇಲ್ಲಿನ ಮಾರಿಕಾಂಬಾ ದೇವಸ್ಥಾನದ ತವರುಮನೆ ಎದುರು ಈಚೆಗೆ ವಾಹನವೊಂದರ ಮೂಲಕ ಗೋವುಗಳ ಕಳವು ಮಾಡಿದ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊ ಎಲ್ಲೆಡೆ ವೈರಲ್ ಆಗಿತ್ತು. ಇದರಿಂದ ಕಳ್ಳತನ ಮಾಡಿದವರ ಕುರಿತು ಮಹತ್ವದ ಸುಳಿವು ದೊರಕಿದ್ದು, ಶೀಘ್ರ ಅವರನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.