ಹೊಸನಗರ: ತಾಲ್ಲೂಕಿನ ಅರಮನೆ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭೂಮಿ ಕುಸಿದಿರುವ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುವ ಅವಶ್ಯಕತೆ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಅರಮನೆ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ಗೆ ಶಾಸಕ ಆರಗ ಜ್ಞಾನೇಂದ್ರ ಮಂಗಳವಾರ ಭೇಟಿ ನೀಡಿ ಮಾತನಾಡಿದರು.

ಕಳೆದ ವರ್ಷವೂ ಗ್ರಾಮದಲ್ಲಿ ಭೂಮಿ ಕುಸಿದು ರಸ್ತೆ ಬಿರುಕು ಬಿಟ್ಟಿತ್ತು. ಈ ಬಾರಿ ಮಳೆಗಾಲದ ಆರಂಭದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಬಿರುಕು ಉಂಟಾಗಿರುವುದು ಆತಂಕ ಮೂಡಿಸಿದೆ. ನುರಿತ ತಜ್ಞರನ್ನು ಕರೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ರಶ್ಮಿ ಹಾಲೇಶ್ ಮಾತನಾಡಿ, ಇಲ್ಲಿನ ಸ್ಥಿತಿ ಕುರಿತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗಿದೆ. ಅವರ ಆದೇಶದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಜ್ಯೋತಿ, ತಾಲ್ಲೂಕು ಪಂಚಾಯಿತಿ ಇಒ ನರೇಂದ್ರಕುಮಾರ್, ಅರಮನೆ ಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಪರಮೇಶ್ವರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ, ಬಸವರಾಜ ಹೊದಲ, ರಾಜೇಶ್ ಹಿರೇಮನೆ, ಹಾಲಗದ್ದೆ ಉಮೇಶ್, ಎಚ್.ಜಿ.ರಮಕಾಂತ್, ನಿತಿನ್ ನಗರ, ಕುಂದಗಲ್ ರಾಜಶೇಖರ್, ರಾಮಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.