ಶಿವಮೊಗ್ಗ: ‘ಸರ್ಕಾರ ಜನಹಿತಕ್ಕಾಗಿ ಕಾಲಕಾಲಕ್ಕೆ ರೂಪಿಸಿ ಅನುಷ್ಠಾನಗೊಳಿಸುವ ಕಾಯ್ದೆ-ಕಾನೂನುಗಳ ಜ್ಞಾನ ಜನಸಾಮಾನ್ಯರಿಗೆ ಇರಬೇಕಿರುವುದು ಇಂದಿನ ತುರ್ತು ಅಗತ್ಯ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ತಿಳಿಸಿದರು.

ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆಯಿಂದ ಸೋಮವಾರ ಪೋಕ್ಸೊ ಕಾಯ್ದೆ-2012 ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸುವುದರಿಂದ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯ. ಈವರೆಗೆ ಅನುಷ್ಠಾನಗೊಂಡ ಕಾಯ್ದೆಗಳು ಸದ್ಬಳಕೆಯಾಗುವಂತೆ ನೋಡಿಕೊಳ್ಳುವ ಜೊತೆಗೆ ದುರುಪಯೋಗವಾಗದಂತೆ ತಡೆಯುವ ಅವಶ್ಯಕತೆ ಇದೆ ಎಂದರು.

ಸುತ್ತಮುತ್ತಲ ಪರಿಸರ, ಕೌಟುಂಬಿಕ ವಾತಾವರಣವೂ ಸಹ ಪೋಕ್ಸೊ ಪ್ರಕರಣಕ್ಕೆ ಕಾರಣವಾಗಿರಬಹುದು. ಸ್ನೇಹ-ಸಂಬಂಧಗಳು ಅದರ ಎಲ್ಲೆ ಮೀರದಂತಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು. ಈ ಮಹತ್ವದ ಕಾಯ್ದೆಗಳ ತರಬೇತಿ ಪಡೆದ ಶಿಕ್ಷಕರು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಗೊಳಪಡುವ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ವಿಶೇಷವಾಗಿ ವಿದ್ಯಾರ್ಥಿ ವಲಯದಲ್ಲಿ ಈ ಕಾಯ್ದೆಗಳ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಪೋಕ್ಸೊ ಪ್ರಕರಣ ದಾಖಲಾಗುತ್ತಿವೆ. ಮಹಿಳೆಯರು ಶೋಷಣೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿ. ಜವಾಬ್ದಾರಿಯುತ ಅಧಿಕಾರಿಗಳು ಇರುವ ಕಾನೂನುಗಳ ವ್ಯವಸ್ಥಿತ ಅನುಷ್ಠಾನದಿಂದ ಪ್ರಕರಣಗಳ ದಾಖಲಾತಿಯಲ್ಲಿ ನಿಯಂತ್ರಣ ಸಾಧ್ಯವಾಗಲಿದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜಿಲ್ಲೆಯಲ್ಲಿ ಫೋಕ್ಸೊ ಮತ್ತು ಬಾಲ್ಯವಿವಾಹದಂತಹ ಪ್ರಕರಣಗಳು ಮತ್ತೆ ಮತ್ತೆ ದಾಖಲಾಗುತ್ತಿವೆ. ಅವುಗಳ ನಿಯಂತ್ರಣಕ್ಕಾಗಿ ಜವಾಬ್ದಾರಿಯುತ ಹುದ್ದೆ ಅಲಂಕರಿಸುವ ಅಧಿಕಾರಿ-ನೌಕರರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶಶಿರೇಖಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಾಗರತ್ನಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.