ವಿದ್ಯಾರ್ಥಿ ಮೇಲೆ ಹಲ್ಲೆ; ನಾಲ್ವರು ಯುವಕರ ಮೇಲೆ ದೂರು ದಾಖಲು
ರಿಪ್ಪನ್ಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿ ಮೇಲೆ ನಾಲ್ವರು ಯುವಕರು ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.
ವಿದ್ಯಾರ್ಥಿ ಗಾಳಿಬೈಲ್ ಗ್ರಾಮಕ್ಕೆ ಖಾಸಗಿ ಬಸ್ನಲ್ಲಿ ತೆರಳುತ್ತಿದ್ದಾಗ ಎರಡು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ಯುವಕರ ತಂಡ ಕೆತ್ತಲಗುಡ್ಡೆ ವೃತ್ತದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಯನ್ನು ಬಸ್ಸಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.