ಗುರುವಾರ , ಮಾರ್ಚ್ 23, 2023
30 °C
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ಪಕ್ಷದೊಳಗೆ ಟೀಕೆ ಸರಿಯಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಪಕ್ಷದ ಒಳಗೂ ಟೀಕೆ ಮಾಡುವ ಬೆಳವಣಿಗೆ ಈಗ ಬಿಜೆಪಿಯಲ್ಲೂ ಬಂದು ಬಿಟ್ಟಿದೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

‘ಪಕ್ಷದ ಒಳಗಿರುವವರು ಟೀಕೆ ಮಾಡುವ ವ್ಯವಸ್ಥೆ ನಮ್ಮಲ್ಲಿ ಎಂದೂ ಇರಲಿಲ್ಲ. ಯಾರೇ ಏನೇ ಮಾತನಾಡಿದರೂ ಪರವಾಗಿಲ್ಲ. ಸಂಘಟನೆ ಶಕ್ತಿಯುತವಾಗಿ ಬೆಳೆಸಿ
ಕೊಂಡು ಹೋಗುತ್ತಿದ್ದರೆ ಎಂದಿಗೂ ನಮ್ಮ ಪಕ್ಷಕ್ಕೆ ತೊಂದರೆಯಾಗುವುದಿಲ್ಲ. ಕೋವಿಡ್ ಬರುತ್ತೋ, ಸರ್ಕಾರ ಬರುತ್ತೋ, ಮುಖ್ಯಮಂತ್ರಿ ಬದಲಾಗ್ತಾರೋ, ಇರ್ತಾರೋ ಗೊತ್ತಿಲ್ಲ. ಆದರೆ ಪಕ್ಷದ ಕಾರ್ಯಕರ್ತರು ತಮ್ಮ ನಿಷ್ಠೆ, ಸಿದ್ಧಾಂತ ನಂಬಿ ಸಂಘಟನೆ ಬೆಳೆಸಬೇಕಿದೆ’ ಎಂದು ಸಲಹೆ ನೀಡಿದರು.

‘ಪಕ್ಷದ ಒಳಗೆ ಇರಲಿ, ಹೊರಗೆ ಇರಲಿ ಯಾರಾದರೂ ಟೀಕೆ ಮಾಡಲಿ, ಯಾರಾದರೂ ಏನಾದರೂ ಮಾತನಾಡಿಕೊಂಡು ಹೋಗಲಿ, ವಿರೋಧಿಗಳ ಟೀಕೆಗೆ ಸಂಘಟನೆ ಮೂಲಕವೇ ಉತ್ತರ ನೀಡಬೇಕು. ಸಂಘಟನೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕರ್ತರು ಗಮನ ಕೇಂದ್ರೀಕರಿಸಬೇಕು’ ಎಂದು ಕಿವಿಮಾತು ಹೇಳಿದರು.

ಸಂಸದ ಬಿ.ವೈ. ರಾಘವೇಂದ್ರ, ‘ಪಕ್ಷಕ್ಕೆ ಸಂಘಟನೆಯು ಅತಿ ಮುಖ್ಯವಾಗಿರುತ್ತದೆ. ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಆಗಬೇಕು’ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಕೊರೊನಾ ಕಾಲದಲ್ಲಿ ಜನರ ಜೀವ ರಕ್ಷಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿ, ಹಗಲಿರುಳು ಶ್ರಮಿಸಿದೆ. ನೊಂದವರಿಗೆ, ಕೊರೊನಾದಿಂದ ಸಂಕಷ್ಟ ಅನುಭವಿಸುತ್ತಿದ್ದವರಿಗೆ ವಿಶೇಷ ಪ್ಯಾಕೇಜ್‌ ನೀಡಿ, ಜನರ ಯೋಗಕ್ಷೇಮವನ್ನು ನೋಡಿಕೊಂಡಿದೆ. ಸರ್ಕಾರ ಯೋಜನೆಗಳನ್ನು ಜನರಿಗೆ ತಲುಪಿಸಲು ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕಾರಿಣಿಯಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಸದಸ್ಯ ಭಾನುಪ್ರಕಾಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್‌, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಮುಖಂಡರಾದ ಪಟ್ಟಾಭಿರಾಮ್, ಮಧುಸೂದನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು