ತ್ಯಾಗರ್ತಿ: ಸಿಡಿಲು ಬಡಿದು ಮನೆಗೆ ಹಾನಿ

ತ್ಯಾಗರ್ತಿ: ಭಾನುವಾರ ಸುರಿದ ಭಾರಿ ಮಳೆಗೆ ಸಮೀಪದ ನೀಚಡಿ ಗ್ರಾಮದ ಕೆ.ಕೆ.ನಾಗರಾಜ್ ಅವರ ಮನೆಗೆ ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ.
ಸಿಡಿಲು ಬಡಿತದ ರಭಸಕ್ಕೆ ಮನೆಯ ಹೆಂಚುಗಳು ಮುರಿದುಬಿದ್ದಿದ್ದು, ಗೋಡೆ ಬಿರುಕು ಬಿಟ್ಟಿದೆ. ವೈರಿಂಗ್‌ಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಿತೀಶ್, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.