ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಚಿತ ವರ್ತನೆ ತಹಶೀಲ್ದಾರ್‌ ವಿರುದ್ಧ ಡಿ.ಸಿ ಕ್ರಮ

ಮಹಿಳಾ ಸಿಬ್ಬಂದಿ ಜತೆ ತಹಶೀಲ್ದಾರ್‌ ಅನುಚಿತ ವರ್ತನೆ
Last Updated 15 ಸೆಪ್ಟೆಂಬರ್ 2020, 19:19 IST
ಅಕ್ಷರ ಗಾತ್ರ

ಭದ್ರಾವತಿ: ಮಹಿಳಾ ಸಿಬ್ಬಂದಿ ಜತೆಗೆ ಅನುಚಿತ ವರ್ತನೆ ಆರೋಪದ ಮೇಲೆ ತಹಶೀಲ್ದಾರ್ ಎಚ್‌.ಸಿ. ಶಿವಕುಮಾರ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಹಿಳಾ ಸಿಬ್ಬಂದಿ ಜತೆಗೆ ತಹಶೀಲ್ದಾರ್‌ ಅವರು ಅನುಚಿತವಾಗಿ ವರ್ತಿಸಿದ ಸಂಬಂಧಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ಕೆಲ ಹೊತ್ತಿನಲ್ಲೇ ಜಿಲ್ಲಾಧಿಕಾರಿ ಈ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಶಿವಕುಮಾರ್‌ ಅವರ ಸ್ಥಾನಕ್ಕೆ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜೆ. ನಾಗರಾಜ್ ಅವರನ್ನು ಪ್ರಭಾರರನ್ನಾಗಿ ನೇಮಿಸಿದ್ದಾರೆ.

ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ: ತಹಶೀಲ್ದಾರ್ ಶಿವಕುಮಾರ್ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಹಳೇನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಆರಂಭದಲ್ಲಿ ಮಹಿಳೆ ನೀಡಿದ್ದ ದೂರನ್ನು ಪೊಲೀಸರು ದಾಖಲಿಸಿಕೊಂಡಿರಲಿಲ್ಲ. ಡಿಎಸ್‌ಎಸ್‌ ಹಾಗೂ ಜೆಡಿಎಸ್‌ ಮುಖಂಡರು ಠಾಣೆ ಎದುರು ಪ್ರತಿಭಟನೆ ನಡೆಸಿದ ಬಳಿಕ ಎಫ್‌ಐಆರ್‌ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT