ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರವಿನ ನಂತರವೂ ಕೆರೆ ಒತ್ತುವರಿ; ಪ್ರಕರಣ ದಾಖಲಿಸಿ

ಕೆರೆಗಳ ಒತ್ತುವರಿ ತೆರವು ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ
Last Updated 13 ಆಗಸ್ಟ್ 2021, 4:07 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳ ಸರ್ವೆ ಕಾರ್ಯವನ್ನು ಶೀಘ್ರವೇ ಕೈಗೊಳ್ಳಬೇಕು. ಒತ್ತುವರಿ ಕಂಡುಬಂದರೆ ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಮ್ಮಿಕೊಂಡಿದ್ದ ಕೆರೆಗಳ ಒತ್ತುವರಿ ತೆರವು ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಎಲ್ಲ ಕೆರೆಗಳ ಸರ್ವೆ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ತಹಶೀಲ್ದಾರ್‌ಗಳು ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿ ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿದ ವರದಿಯನ್ನು ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ, ಆ ಕೆರೆಯನ್ನು ಸಂಬಂಧಪಟ್ಟ ಇಲಾಖೆಯ ಸುಪರ್ದಿಗೆ ಒಪ್ಪಿಸಬೇಕು. ಇಲಾಖೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಬೇಕು. ತಕ್ಷಣ ಅಧಿಸೂಚನೆ ಹೊರಡಿಸಬೇಕು. ಮತ್ತೆ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ತಾಕೀತು ಮಾಡಿದರು.

ಯಾವುದೇ ಕಾರಣಕ್ಕೂ ಕೆರೆಯನ್ನು ಒತ್ತುವರಿ ಮಾಡಲು ಅವಕಾಶ ಕಲ್ಪಿಸಬಾರದು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿಕೊಂಡು ಒತ್ತುವರಿ ತೆರವು ಮತ್ತು ಸಂರಕ್ಷಣೆಗೆ ಕ್ರಿಯಾ ಯೋಜನೆ ರೂಪಿಸಬೇಕು. ಎಚ್ಚರಿಕೆ ಕೊಟ್ಟ ಬಳಿಕವೂ ಒತ್ತುವರಿ ಮುಂದುವರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ.ಶೇಖರ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT