ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರೆಂಟೈನ್ ಉಲ್ಲಂಘಿಸಿದರೆ ಎಫ್‌ಐಆರ್

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಕೆ
Last Updated 9 ಜುಲೈ 2020, 13:15 IST
ಅಕ್ಷರ ಗಾತ್ರ

ಶಿವಮೊಗ್ಗ: ಕ್ವಾರೆಂಟೈನ್ ಮಾರ್ಗಸೂಚಿಗಳನ್ನುಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದುಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ಎಚ್ಚರಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೊರೊನಾ ನಿರ್ವಹಣೆಯ ಸ್ಥಿತಿಗತಿಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾಪ್ರಕರಣಗಳು ಹೆಚ್ಚಾಗುತ್ತಿವೆ.ಕ್ವಾರೆಂಟೈನ್ ಮಾರ್ಗಸೂಚಿ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹೋಂ ಕ್ವಾರೆಂಟೈನ್ ಉಲ್ಲಂಘನೆಯ ಪ್ರಥಮ ಪ್ರಕರಣದಲ್ಲೇ ಎಫ್‍ಐಆರ್ ದಾಖಲಿಸಬೇಕು. ಮೂರನೇ ಬಾರಿ ಉಲ್ಲಂಘಿಸಿದರೆ ಐಪಿಸಿ 107ಅಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು ಎಂದು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಅಂತರ ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದರೆ ಅಂತಹ ಅಂಗಡಿಗಳಿಗೆದಂಡ ವಿಧಿಸಬೇಕು. ಮಾಸ್ಕ್ ಧರಿಸುವುದರ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸಬೇಕು. ದಂಡ ವಿಧಿಸುವ ಪ್ರಕ್ರಿಯೆ ಆರಂಭಿಸಬೇಕು. ಜನಸಂದಣಿಪ್ರದೇಶಗಳಲ್ಲಿ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸಬೇಕುಎಂದರು.

ತಾಲೂಕು ಮಟ್ಟದ ಸಮಿತಿ: ಜಿಲ್ಲಾಮಟ್ಟದ ಸರ್ವೇಕ್ಷಣಾ ಸಮಿತಿ ರೀತಿ ತಾಲ್ಲೂಕುಮಟ್ಟದಲ್ಲೂ ತಹಶೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಅದೇ ರೀತಿ ಗ್ರಾಮ, ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಕಾರ್ಯಪಡೆ ರಚಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿಸಿಇಒ ಎಂ.ಎಲ್.ವೈಶಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ,ವೈದ್ಯಕೀಯ ಕಾಲೇಜುನಿರ್ದೇಶಕ ಡಾ.ಸಿದ್ದಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ರಾಜೇಶ ಸುರಗಿಹಳ್ಳಿಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT