ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ಪಡೆಯದ ರೈತರಿಗೂ ಫಸಲ್‌ ಬಿಮಾ: ಶಿವಕುಮಾರ್

Last Updated 2 ಜುಲೈ 2020, 14:16 IST
ಅಕ್ಷರ ಗಾತ್ರ

ಶಿವಮೊಗ್ಗ: ಬ್ಯಾಂಕ್‌, ಸಹಕಾರಿ ವಲಯದಲ್ಲಿ ಸಾಲ ಪಡೆಯದ ರೈತರನ್ನುಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದುಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಯಡಿ ಜಿಲ್ಲೆಯಲ್ಲಿ504 ರೈತರು ಹೆಸರು ನೋಂದಾಯಿಸಿದ್ದಾರೆ. ಅವರಲ್ಲಿ266ರೈತರು ಸಾಲ ಪಡೆದಿದ್ದಾರೆ. 238 ಸಾಲ ಪಡೆಯದ ರೈತರು 952 ಎಕರೆ ಭೂಮಿ ಸಾಗುವಳಿ ಮಾಡಿದ್ದಾರೆ.ಇದುವರೆಗೆ ಸಾಲ ಪಡೆದ ರೈತರು ಕಡ್ಡಾಯವಾಗಿ ಯೋಜನೆ ವ್ಯಾಪ್ತಿಗೆ ಒಳಪಡುತ್ತಿದ್ದರು. ಈ ಬಾರಿ ಬೆಳೆ ವಿಮೆಯಿಂದ ತಮ್ಮನ್ನು ಕೈಬಿಡುವಂತೆ ರೈತರು ಘೋಷಣಾ ಪತ್ರ ನೀಡಿದರೆ ಅವರನ್ನುಕೈಬಿಡಲಾಗುವುದು ಎಂದರು.

ಬೆಳೆ ವಿಮೆ ಸಂಸ್ಥೆ ರೈತರ ಸಹಾಯಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಪ್ರತಿನಿಧಿಗಳನ್ನು ನಿಯೋಜಿಸಬೇಕು. ಬೆಳೆ ವಿಮೆ ನೋಂದಣಿ ಮತ್ತು ಪರಿಹಾರ ಇತ್ಯರ್ಥಕ್ಕಾಗಿಬ್ಯಾಂಕುಗಳು ಮತ್ತು ವಿಮಾ ಸಂಸ್ಥೆ ಸಮನ್ವಯಸಾಧಿಸಬೇಕು. ಸೇವಾ ಕೇಂದ್ರಗಳಮೂಲಕ ರೈತರ ನೋಂದಣಿ ಪ್ರೋತ್ಸಾಹಿಸಬೇಕು. ಆಧಾರ ಲಿಂಕ್ ಇರುವ ಬ್ಯಾಂಕ್ ಖಾತೆ ಪಡೆಯಬೇಕು ಎಂದುಸಲಹೆ ನೀಡಿದರು.

ಕರೊನಾಸಮಯದಲ್ಲಿಸರ್ಕಾರ ವಿವಿಧ ಫಲಾನುಭವಿಗಳಿಗೆ ನೀಡುವ ಸಹಾಯಧನದ ಮೊತ್ತವನ್ನು ಬ್ಯಾಂಕುಗಳು ಅವರಸಾಲದ ಮೊತ್ತಕ್ಕೆ ಕಟಾಯಿಸಬಾರದು. ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದುಎಂದು ಎಚ್ಚರಿಕೆ ನೀಡಿದರು.

ಯೋಜನೆ ಕುರಿತುಪ್ರಚಾರ ಸಾಮಾಗ್ರಿಗಳನ್ನು ಇದೇ ಸಮಯದಲ್ಲಿ ಜಿಲ್ಲಾಧಿಕಾರಿ ಶಿವಕುಮಾರ್ ಬಿಡುಗಡೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಹೆಚ್ಚುವರಿಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಬ್ರಿಜೆಟ್ ವರ್ಗಿಸ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT