ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಏ. 12 ರಿಂದ 22ರವರೆಗೆ ಡಿ.ಸಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ

Published 6 ಏಪ್ರಿಲ್ 2024, 15:55 IST
Last Updated 6 ಏಪ್ರಿಲ್ 2024, 15:55 IST
ಅಕ್ಷರ ಗಾತ್ರ

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಏ.12ರಿಂದ 22ರವರೆಗೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಹಿಂಪಡೆಯುವ ಪ್ರಕ್ರಿಯೆ ನಡೆಯಲಿದೆ.

ಈ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ವಾಹನ ಒಳಗೊಂಡಂತೆ 3 ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಿದೆ. ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿ ಪ್ರವೇಶಿಸುವ ಅಭ್ಯರ್ಥಿ ಒಳಗೊಂಡಂತೆ 5 ಜನರಿಗೆ ಮಾತ್ರ ಅನುಮತಿ ನೀಡಿದೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ, ಶಸ್ತ್ರಾಸ್ತ್ರ ಮತ್ತು ಮಾರಾಕಾಸ್ತ್ರಗಳನ್ನು ಹಿಡಿದು ತಿರುಗುವುದು ನಿರ್ಬಂಧಿಸಿದೆ.

ಚುನಾವಣಾ ಕಾರ್ಯದ ಮೇಲೆ ನಿರತವಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.

ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡುವಂತಿಲ್ಲ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿ ಪ್ರದರ್ಶಿಸುವುದಾಗಲಿ, ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳ ನಿಷೇಧಿಸಿದೆ.

ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT