ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆಗಳ ಸಾವು: ಹೊಲದ ಮಾಲೀಕನ ಬಂಧನ

Last Updated 27 ಸೆಪ್ಟೆಂಬರ್ 2022, 4:35 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಲ್ಲೂಕಿನ ಆಯನೂರು ಸಮೀಪದ ಚನ್ನಹಳ್ಳಿ ಬಳಿ ವಿದ್ಯುತ್ ಸ್ಪರ್ಶದಿಂದ ಎರಡು ಗಂಡು ಕಾಡಾನೆಗಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಲದ ಮಾಲೀಕ ಚಂದ್ರಾ ನಾಯಕ್ (51) ಎಂಬುವವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸೋಮವಾರ ಸಂಜೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು.

ಮರಣೋತ್ತರ ಪರೀಕ್ಷೆ: ಸಾವಿಗೀಡಾದ ಆನೆಗಳ ಮರಣೋತ್ತರ ಪರೀಕ್ಷೆ ಬೆಳಿಗ್ಗೆ ಸಕ್ರೆಬೈಲು ಆನೆ ಬಿಡಾರದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಅಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಆರೋಪಿ ಹೊಲದ ಬೇಲಿಗೆ ಬೇಟೆಯ ಉದ್ದೇಶದಿಂದ ವಿದ್ಯುತ್ ಸಂಪರ್ಕ ನೀಡಿದ್ದನೇ ಇಲ್ಲವೇ ಬೆಳೆ ರಕ್ಷಣೆಗೆ ಹಾಕಿದ್ದೇ ಎಂಬುದರ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ. ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT