ಶಿವಮೊಗ್ಗ: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೆಪಿಸಿಸಿ ರಾಜ್ಯ ಸಂಯೋಜಕ ಆರ್.ಮೋಹನ್ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ನಿಯಮಗಳನ್ನು ಪಾಲಿಸುತ್ತಿದೆ. ಕೆ.ಎಸ್. ಈಶ್ವರಪ್ಪ ಜಲಸಂಪನ್ಮೂಲ ಸಚಿವರೂ ಆಗಿದ್ದವರು. ಅವರಿಗೆ ಇದರ ಪರಿವೆ ಇಲ್ಲವೆ. ಇದು ಗೊತ್ತಿದ್ದರೂ ಅವರು ಡಿ.ಕೆ.ಶಿವಕುಮಾರ್ ಅವರನ್ನು ನೀರಿನ ಕಳ್ಳ ಎಂದು ಅವಮಾನಿಸಿದ್ದಾರೆ. ಆದ್ದರಿಂದ ಈಶ್ವರಪ್ಪ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಒ.ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್, ಪ್ರಮುಖರಾದ ರಂಗಸ್ವಾಮಿ ಗೌಡ, ಟಾಕ್ರ್ಯಾನಾಯ್ಕ, ಸಿದ್ದಪ್ಪ, ಗಣೇಶ್, ಶ್ರೀಕಾಂತ್, ಮಂಜು ನಾಯ್ಕ, ಸುರೇಶ್ ಕಲ್ಮನೆ, ಮುತ್ತಣ್ಣ ಶಿಕಾರಿಪುರ, ಅಮರ್, ಕುರುವಳ್ಳಿ ನಾಗರಾಜ್, ಗಾಜನೂರು ಸುದೀಪ್, ರಾಮಚಂದ್ರ ನಾಯ್ಕ, ಸತ್ಯನಾರಾಯಣ, ಗಾಜನೂರು ನಾಗರಾಜ್, ಲೋಕೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.