ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸಾವು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಶನಿವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 600ಕ್ಕೂ ಅಧಿಕ ಬಾಣಂತಿಯರು ಮತ್ತು ಸಾವಿರಕ್ಕೂ ಹೆಚ್ಚು ನವಜಾತ ಶಿಶುಗಳು ಮರಣ ಹೊಂದಿವೆ. ಸರಣಿ ಸಾವಿನ ಪ್ರಕರಣಗಳ ನಡೆಯುತ್ತಿವೆ. ಇದಕ್ಕೆ ಕಳಪೆ ಮಟ್ಟದ ಔಷಧಿ ಪೂರೈಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಬೇಜವಾಬ್ದಾರಿಯಿಂದ ಆಡಳಿತ ನಡೆಸುತ್ತಿರುವ ಮತ್ತು ಸರಣಿ ಸಾವು ಸಂಭವಿಸುತ್ತಿದ್ದರೂ ಇದಕ್ಕೂ ತಮಗೂ ಕಿಂಚಿತ್ತು ಸಂಬಂಧ ಎಲ್ಲ ಎಂಬಂತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸಚಿವ ಸಂಪುಟದಿಂದ ಸಿಎಂ ಅವರು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬೇಕು. ಅಮಾಯಕರ ಜೀವಗಳು ಬಲಿಯಾಗುತ್ತಿವೆ ಎಂದರು.

ಬಾಣಂತಿಯರು ಉಳಿಯುತ್ತಿಲ್ಲ, ಇತ್ತ ನವಜಾತ ಶಿಶುಗಳು ಬದುಕುತ್ತಿಲ್ಲ. ಇದರಿಂದಾಗಿ ಮನನೊಂದು ಪತಿಯಂದಿರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ನೀಡಿರುವ ಮತ್ತೊಂದು ಗ್ಯಾರಂಟಿ ಭಾಗ್ಯವಾಗಿದೆ ಎಂದು ಆರೋಪಿಸಿದರು.

ಸಾವಿನ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರ ಮೃತ ತಾಯಂದಿರ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು. ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವುಗಳು ಹೆಚ್ಚಳ ಆತಂಕದವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ತಾಯಿ ಮತ್ತು ನವಜಾತ ಶಿಶುಗಳ ಸಾವು ತಡೆಯಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿದೇವಿ ಮಲ್ಲಪ್ಪ ಆಗ್ರಹಿಸಿದರು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ, ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಹೇಮಂತ್ ಕುಮಾರ್, ಎಸ್. ದತ್ತಾತ್ರಿ, ಮೋಹನರೆಡ್ಡಿ, ಸುರೇಖಾ, ಡಾ. ಶ್ರೀನಿವಾಸರೆಡ್ಡಿ, ರಶ್ಮಿ, ಕೆ.ವಿ. ಅಣ್ಣಪ್ಪ, ಜ್ಯೋತಿ, ಮಂಗಳಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.