ಭದ್ರಾವತಿ: ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಇಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಸೆ. 6ರಂದು ನಡೆದ ಭದ್ರಾ ಕಾಡಾ ಸಭೆಯಲ್ಲಿ ನೀರು ಹರಿಸಲು ಆನ್ ಅಂಡ್ ಆಫ್ ಪದ್ಧತಿ ಅನುಸರಿಸಲು ತೀರ್ಮಾನಿಸಲಾಗಿತ್ತು. ಈ ತೀರ್ಮಾನದ ಪ್ರಕಾರ ಸೆ.16ರಂದು ನೀರು ಹರಿಸುವುದನ್ನು ನಿಲ್ಲಿಸಬೇಕಾಗಿತ್ತು. ಆದರೆ, ಇಲ್ಲಿಯವರೆಗೂ ನೀರು ನಿಲ್ಲಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ನೀರು ಹರಿಸುವುದನ್ನು ನಿಲ್ಲಿಸದ್ದಿದ್ದರೆ ಬೇಸಿಗೆಯಲ್ಲಿ ಅಡಿಕೆ ತೋಟಗಳನ್ನು ಕಡಿದು ಹಾಕುವ ಪರಿಸ್ಥಿತಿ ಬರುತ್ತದೆ. ಆದ್ದರಿಂದ ತಕ್ಷಣವೇ ಜಲಾಶಯದ ಗೇಟ್ ಬಂದ್ ಮಾಡಬೇಕು ಎಂದು ಆಗ್ರಹಿಸಿದರು. ನಂತರ ನೀರು ಹರಿಸುವುದನ್ನು ನಿಲ್ಲಿಸಲಾಯಿತು.
ರಾಜ್ಯ ಉಪಾಧ್ಯಕ್ಷ ಟಿ.ಎಂ.ಚಂದ್ರಪ್ಪ, ಜಿಲ್ಲಾ ಅಧ್ಯಕ್ಷ ಎಸ್.ಶಿವಮೂರ್ತಿ, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಭದ್ರಾವತಿ ತಾಲ್ಲೂಕು ಅಧ್ಯಕ್ಷ ಜಿ.ಎನ್ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಸಿ.ಬಿ.ಹನುಮಂತಪ್ಪ, ಕೆ.ಎಚ್.ಪ್ರಕಾಶ್, ಎಂ.ಎಚ್.ಬಸವನಗೌಡ, ಕಾರ್ಯದರ್ಶಿ ಎಚ್.ಜೆ.ಮಂಜುನಾಥ್, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಚಂದ್ರಪ್ಪ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.