ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾಪ್ರಭುತ್ವ ದಿನ ಆಚರಣೆ; ಯಶಸ್ಸಿಗೆ ಕೈ ಜೋಡಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ

ಜಿಲ್ಲೆಯ ಜನತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ
Published : 6 ಸೆಪ್ಟೆಂಬರ್ 2024, 13:36 IST
Last Updated : 6 ಸೆಪ್ಟೆಂಬರ್ 2024, 13:36 IST
ಫಾಲೋ ಮಾಡಿ
Comments

ಶಿವಮೊಗ್ಗ: ‘ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಯಶಸ್ಸಿಗೆ ಕೇವಲ ಅಧಿಕಾರಿಗಳು ಮಾತ್ರವಲ್ಲ ಜಿಲ್ಲೆಯ ಜನರು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಗ್ಗೆ ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ ಹಾಕಿದ್ದಾರೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ರಾಜ್ಯದಾದ್ಯಂತ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುತ್ತಿದೆ.

ವಿವಿಧ ಕಲಾಮೇಳದೊಂದಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್‌–ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಕೆಡೆಟ್‌ಗಳು ಹಾಗೂ ಸಾರ್ವಜನಿಕರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮಹತ್ವವನ್ನು ಯುವ ಪೀಳಿಗೆಗೆ ತಿಳಿಸುವುದು ಹಾಗೂ ಪ್ರತಿಯೊಬ್ಬರಲ್ಲೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶ ಈ ಕಾರ್ಯಕ್ರಮದ್ದು ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೋಭಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಸುರೇಶ್ ಉಪಸ್ಥಿತರಿದ್ದರು.

60 ಕಿ.ಮೀ ಉದ್ದದ ಮಾನವ ಸರಪಳಿ ರಚನೆ!

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಪೂರಕವಾಗಿ ಒಗ್ಗಟ್ಟು ಪ್ರದರ್ಶಿಸಲು ಸೆ.15ರಂದು ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲ್ಲೂಕಿನ ಮಡಿಕೆಚೀಲೂರುವರೆಗೆ 60 ಕಿ.ಮೀ ದೂರದವರೆಗೆ ಮಾನವ ಸರಪಳಿ ರಚಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. 8 ಗ್ರಾಮ ಪಂಚಾಯಿತಿ ವ್ಯಾಪ್ತಿ ಸ್ಥಳೀಯ ಸಂಸ್ಥೆಗಳು ನಗರ ವ್ಯಾಪ್ತಿಯನ್ನು ಒಳಗೊಂಡು ಮಾನವ ಸರಪಳಿ ರಚಿಸಲು ಸಿದ್ಧತೆ ನಡೆಸಲಾಗಿದೆ ಎಂದು ಗುರುದತ್ತ ಹೆಗಡೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT