ಶಿವಮೊಗ್ಗ: ರಾಜ್ಯದಲ್ಲಿ ನಡೆಸಿದ ಆಪರೇಷನ್ ಕಮಲದ ಪ್ರಯೋಗವನ್ನು ಈಗ ಸ್ಥಳೀಯ ಸಂಸ್ಥೆಗಳಲ್ಲೂ ಅನುಸರಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು.

ನಗರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪರೇಷನ್ ಕಮಲದ ಜನಕ. ಅವರ ತವರು ಕ್ಷೇತ್ರ ಶಿಕಾರಿಪುರ ಪುರಸಭೆಯನ್ನೂ ಬಿಟ್ಟಿಲ್ಲ. ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯ ಬಿಜೆಪಿಯಲ್ಲಿ ಸದ್ಯ ಮೂರು ಬಣಗಳಿವೆ.ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಈ ಕುರಿತು ತಮಗೆ ಖಚಿತ ಮಾಹಿತಿ ದೊರೆತಿದೆ ಎಂದರು.

ಶಿರಾ ಮತ್ತು ಆರ್‌ಆರ್ ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಸಮೀಕ್ಷೆಗಳು ಉಲ್ಟಾ ಆಗಲಿವೆ. ನಾಲ್ಕು ದಿನಗಳು ಪ್ರಚಾರದಲ್ಲಿ ಭಾಗವಿಸಿದ್ದೆ. ಮತದಾರರು ಕಾಂಗ್ರೆಸ್ ಪರ ಇದ್ದಾರೆ ಎನ್ನುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡವಿದೆ. ಕೇಂದ್ರ ಸರ್ಕಾರ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.