ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ: ಡೆಂಗಿಗೆ ಆರೋಗ್ಯ ಇಲಾಖೆ ನೌಕರ ಬಲಿ

Published 13 ಜೂನ್ 2024, 14:02 IST
Last Updated 13 ಜೂನ್ 2024, 14:02 IST
ಅಕ್ಷರ ಗಾತ್ರ

ಶಿವಮೊಗ್ಗ: ಆರೋಗ್ಯ ಇಲಾಖೆ ನೌಕರರೊಬ್ಬರು ಡೆಂಗಿಯಿಂದ ಸಾವಿಗೀಡಾಗಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ನಾಗರಾಜ್ (34) ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಇವರು ಕಳೆದ ಭಾನುವಾರ ಕೆಂಪು ರಕ್ತ ಕಣಗಳು ಕಡಿಮೆಯಾಗಿ ಏಕಾಏಕಿ ಅಸ್ವಸ್ಥರಾಗಿದ್ದರು. ಅವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿಯೇ ದಾಖಲಿಸಲಾಗಿತ್ತು. ಅಲ್ಲಿ ರಕ್ತ ಪರೀಕ್ಷೆ ನಡೆಸಿದಾಗ ಡೆಂಗಿ ಸೋಂಕು ಇರುವುದು ದೃಢಪಟ್ಟಿತ್ತು.

ಅಲ್ಲೇ ಎರಡು ದಿನ ಚಿಕಿತ್ಸೆ ನೀಡಿ, ನಂತರ ಶಿವಮೊಗ್ಗದ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT