ಶುಕ್ರವಾರ, ಡಿಸೆಂಬರ್ 3, 2021
26 °C

ವಾಹನ ತಪಾಸಣೆ ವೇಳೆ ಮಾರಾಕಾಸ್ತ್ರ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಇಲ್ಲಿನ ವಿನೋಬನಗರ 2ನೇ ಹಂತದಲ್ಲಿ ಮಂಗಳವಾರ ವಾಹನ ತಪಾಸಣೆ ವೇಳೆ ಬೈಕ್‌ ಸವಾರರ ಬಳಿ ಮಾರಾಕಾಸ್ತ್ರಗಳು ಪತ್ತೆಯಾಗಿದ್ದು, ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಂಗಾನಗರದ ಪ್ರವೀಣ್ ಮತ್ತು ತರಿಕೆರೆಯ ಸಂತೋಷ್ ಬಂಧಿತರು. ಪಲ್ಸರ್ ಬೈಕಿನಲ್ಲಿ ಬಂದಿದ್ದ ಇವರನ್ನು ಪೊಲೀಸರು ತಡೆದಿದ್ದಾರೆ. ತಪಾಸಣೆಗೂ ಮುನ್ನ ವಿಚಾರಣೆ ಮಾಡುತ್ತಿದ್ದಂತೆ ಈ ಇಬ್ಬರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ಹಿಡಿದು ಪರಿಶೀಲಿಸಿದಾಗ ಅವರ ಬಳಿ ಮಾರಾಕಾಸ್ತ್ರಗಳು ಪತ್ತೆಯಾಗಿವೆ. ಈ ಸಂಬಂಧ  ಪೊಲೀಸರು ವಶಕ್ಕೆ ‍ಪಡೆದು ವಿಚಾರಣೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು