ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗೋಡು ತಿಮ್ಮಪ್ಪಗೆ ಅರಸು ಪ್ರಶಸ್ತಿ

Published 17 ಆಗಸ್ಟ್ 2023, 19:29 IST
Last Updated 17 ಆಗಸ್ಟ್ 2023, 19:29 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ 2023–24 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಿಸಲಾಗಿದೆ.

ಇದೇ 20 ರಂದು ವಿಧಾನಸೌಧದ ಬಾಂಕ್ವೆಟ್‌ಹಾಲ್‌ನಲ್ಲಿ ನಡೆಯುವ ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಸಾಗರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕಾಗೋಡು ತಿಮ್ಮಪ್ಪ ಅವರು ಆರೋಗ್ಯ, ಕಂದಾಯ, ಸಮಾಜ ಕಲ್ಯಾಣ ಮತ್ತು ಇತರ ಖಾತೆಗಳ ಸಚಿವರಾಗಿ ಹಾಗೂ ವಿಧಾನಸಭಾ ಸಭಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT