ಶಿಕಾರಿಪುರ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾವ ದುಷ್ಟ ಶಕ್ತಿಗಳಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಬುಧವಾರ ನಡೆದ ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್‌ಗೆ ಕಲ್ಪನೆ ಇರಲಿಲ್ಲ. ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಮೇಲೆ ದೇಶದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದಾರೆ. ನಾನು ಈ ಕ್ಷೇತ್ರದಿಂದ ಸ್ಪರ್ಧೆ ಮಾಡುವುದನ್ನು ನಮ್ಮ ಕುಟುಂಬ ನಿರ್ಧರಿಸಿಲ್ಲ. ತಾಲ್ಲೂಕಿನ ಮುಖಂಡರು, ಕಾರ್ಯಕರ್ತರು ನಿರ್ಧಾರ ಮಾಡಿದ್ದಾರೆ’ ಎಂದರು.
‘ಪ್ರಧಾನಿ ನರೇಂದ್ರ ಮೋದಿ ಆಡಳಿತದಿಂದ ದೇಶಕ್ಕೆ ಗೌರವ ಬಂದಿದೆ. ಬಿಜೆಪಿ ಸರ್ಕಾರ ಸಾಕಷ್ಟು ಅಭಿವೃದ್ಧಿ ಯೋಜನೆ ನೀಡಿದೆ’ ಎಂದು ವಿಧಾನಪರಿಷತ್ ಸದಸ್ಯ ರುದ್ರೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
‘ಯಡಿಯೂರಪ್ಪ ಸ್ಥಾನ ತುಂಬುವ ಅವಕಾಶ ವಿಜಯೇಂದ್ರಗೆ ದೊರೆತಿದೆ. ವಿಜಯೇಂದ್ರ ಆವರನ್ನು ಅತ್ಯಧಿಕ ಮತದಿಂದ ಆಯ್ಕೆ ಮಾಡಬೇಕು’ ಎಂದು ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಎಚ್.ಟಿ. ಬಳಿಗಾರ್ ಮನವಿ ಮಾಡಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮಣಪ್ಪ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ನಿರ್ದೇಶಕ ಬಿ.ಡಿ. ಭೂಕಾಂತ್, ಮುಖಂಡರಾದ ಸಣ್ಣಹನುಮಂತಪ್ಪ, ನಾಗರಾಜ್, ಹನುಮಂತಪ್ಪ ಓಲೆಕಾರ್, ಅಶೋಕ್, ನಿಂಬೆಗೊಂದಿ ಸುರೇಶ್, ವೀರೇಂದ್ರ ಪಾಟೀಲ್, ಸುರೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.