ಸೋಮವಾರ, ಜನವರಿ 24, 2022
28 °C

ಶಿವಮೊಗ್ಗ | ಸಿಗಂದೂರಿನಲ್ಲಿ ವಾರಾಂತ್ಯದಲ್ಲಿ ದೇವಿ ದರ್ಶನ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮರಿ: ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ವಾರಾಂತ್ಯದಲ್ಲಿ ಭಕ್ತರಿಗೆ ದೇವಿ ದರ್ಶನ ಸಂಪೂರ್ಣ ನಿಷೇಧಿಸಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ಮಾರ್ಗಸೂಚಿ ಅನ್ವಯ ದರ್ಶನಕ್ಕೆ ಅವಕಾಶವಿರುತ್ತದೆ. ಹೊ‌ಸ ವರ್ಷದ ನಂತರ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಕೊರೊನಾ ಸೋಂಕು ಹರಡುವ ಭೀತಿ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಶನಿವಾರ ಹಾಗೂ ಭಾನುವಾರ ದರ್ಶನದ ಜತೆ ವಸತಿ, ಪ್ರಸಾದ ವಿತರಣೆಯನ್ನೂ ನಿಷೇಧಿಸಲಾಗಿದೆ. ಭಕ್ತರು ಸಹಕರಿಸಬೇಕು ಎಂದು ಧರ್ಮಾಧಿಕಾರಿ ಡಾ.ಎಸ್. ರಾಮಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.