ಸೊರಬ: ತಾಲ್ಲೂಕಿನ ಪುರಾಣ ಚಂದ್ರಗುತ್ತಿ ಪ್ರಸಿದ್ಧ ರೇಣುಕಾಂಬಾ ದೇವಸ್ಥಾನಕ್ಕೆ ಯುಗಾದಿ ಹಬ್ಬದ ಅಂಗವಾಗಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ತಾಲ್ಲೂಕು ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಬಂದು ರೇಣುಕಾಂಬೆಯ ದರ್ಶನ ಪಡೆದರು. ಪರಿವಾರ ದೇವರಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ, ತ್ರಿಶೂಲದ ಭೈರಪ್ಪ, ದೇವರಿಗೆ ಪೂಜೆ ನೆರವೇರಿಸಲಾಯಿತು.
ಭಕ್ತರು ದೇವಸ್ಥಾನದ ಆವರಣದಲ್ಲಿ ಬೇವು–ಬೆಲ್ಲವನ್ನು ಹಂಚಿ ಸಂಭ್ರಮಿಸಿದರು. ರೇಣುಕಾಂಬಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಭಕ್ತರಿಗೆ ಪಂಚಕಜ್ಜಾಯ– ಪಾನಕ ವಿತರಿಸಲಾಯಿತು.
ಗ್ರಾಮದ ಮನೆ ಮನೆ ಬಾಗಿಲುಗಳಲ್ಲಿ ಬಣ್ಣ ಬಣ್ಣದ ರಂಗು ರಂಗಿನ ರಂಗೋಲಿಯ ಚಿತ್ತಾರಗಳು ಗಮನ ಸೆಳೆದವು. ಮನೆಯ
ಮುಖ್ಯದ್ವಾರಗಳಿಗೆ ಮಾವಿನ ಎಲೆಗಳ ತೋರಣ ಕಟ್ಟಿ ಅಲಂಕಾರ ಮಾಡಲಾಗಿತ್ತು. ಜನರು ಸಮೀಪದ ಬನಶಂಕರಿ ದೇವಸ್ಥಾನ, ವೀರಭದ್ರ ಸ್ವಾಮಿ ದೇವಸ್ಥಾನ, ಈಶ್ವರ ದೇವಸ್ಥಾನ, ಇತರೆ ದೇವಸ್ಥಾನಗಳಿಗೆ ಭೇಟಿ ನೀಡುವುದರ ಮೂಲಕ ಪೂಜೆ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.