ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳಿಲ್ಲದೆ ರೋಗಿಗಳು ಕಂಗಾಲಾಗಿದ್ದು, ರಾಜ್ಯದ ಬಹುತೇಕ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಜ್ವರ, ನೋವು ನಿವಾರಕ ಮಾತ್ರೆಗಳಿಂದ ಹಿಡಿದು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬೇಕಾದ ಇಂಜೆಕ್ಷನ್ಗಳು ಲಭ್ಯವಿಲ್ಲ. ಬಡವರ ಆರೋಗ್ಯದ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿ ಪ್ರದರ್ಶಿಸುತ್ತಿರುವುದೇಕೆ ಎಂದು ಸೋಮವಾರ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಪ್ರಶ್ನಿಸಿದರು.

ಕಲಾಪದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಪ್ರಶ್ನೆ ಕೇಳಿದ ಸರ್ಜಿ, ಔಷಧ ಲಭ್ಯವಿಲ್ಲದೇ ಆಸ್ಪತ್ರೆಗೆ ಬರುವ ರೋಗಿಗಳು ವೈದ್ಯರ ಜೊತೆ ಜಗಳ ಆಡುತ್ತಿದ್ದಾರೆ. ಔಷಧಗಳನ್ನು ಪೂರೈಸಬೇಕಾದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಏನು ಮಾಡುತ್ತಿದೆ. ಈ ರೀತಿ ಜನರ ಆರೋಗ್ಯದ ಜತೆಗೆ ಸರ್ಕಾರ ಆಟವಾಡುತ್ತಿರುವುದು ಎಷ್ಟು ಸರಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.