ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು ₹ 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು.

ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.

ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.

ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಚಿನ್ನಯ್ಯ ಪತ್ನಿ ಹಾಗೂ ವಕೀಲರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಸಾಕ್ಷಿದೂರುದಾರನನ್ನು ಆ. 23ರಂದು ವಿಶೇಷ ತನಿಖಾ ತಂಡದ ಪೊಲೀಸರು ಬಂಧಿಸಿದ್ದರು. ಸೆ.6ರಂದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆ ಬಳಿಕ ಆತ ಶಿವಮೊಗ್ಗ ಜೈಲಿನಲ್ಲಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.