ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಧ್ರುವನಾರಾಯಣ ಆರೋಪ

Last Updated 4 ಸೆಪ್ಟೆಂಬರ್ 2020, 11:25 IST
ಅಕ್ಷರ ಗಾತ್ರ

ಶಿವಮೊಗ್ಗ:ರಾಜ್ಯ ಸರ್ಕಾರ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಬಹುಕೋಟಿ ಭ್ರಷ್ಟಾಚಾರ ಎಸಗಿದೆ. ಖಜಾನೆ ಲೂಟಿ ಮಾಡಿದೆ. ನಿರ್ವಹಣೆಯಲ್ಲೂವಿಫಲವಾಗಿದೆ ಎಂದುಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಧ್ರುವನಾರಾಯಣ ಆರೋಪಿಸಿದರು.

ರಾಜ್ಯದ ಆರೋಗ್ಯ ಮಂತ್ರಿ ಯಾರು ಎಂಬುದೇಗೊಂದಲವಾಗಿದೆ.ಶ್ರೀರಾಮುಲು ಹೆಸರಿಗಷ್ಟೇ ಮಂತ್ರಿ. ಕೊರೊನಾ ಸರಪಳಿ ತುಂಡರಿಸಲು ಅವರಿಗೆ ಸಾಧ್ಯವಾಗಿಲ್ಲ.ಜನಸಾಮಾನ್ಯರ ಆರೋಗ್ಯ ಕಾಪಾಡುವಲ್ಲಿ ರಾಜ್ಯ, ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಸಮರ್ಪಕ ಪ್ರಮಾಣದಲ್ಲಿ ಸೋಂಕು ಪತ್ತೆ ಪರೀಕ್ಷೆ ನಡೆಸುತ್ತಿಲ್ಲ. ಸರ್ಕಾರಕ್ಕೆ ಆಸಕ್ತಿಯೂ ಇಲ್ಲ. ಜನರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ, ಕೊರೊನಾಸೋಂಕುಹರಡುವುದನ್ನು ತಡೆಯಲು ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕ್ರಮರೂಪಿಸಿದೆ. ಆರೋಗ್ಯ ಹಸ್ತದ ಮೂಲಕ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಕೊರೊನಾ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಈ ಅಭಿಯಾನಕ್ಕಾಗಿ ಸುಮಾರುಕಾಂಗ್ರೆಸ್‌ನ 15 ಸಾವಿರ ಕೊರೊನಾ ವಾರಿಯರ್ಗಳು ತರಬೇತಿ ಪಡೆದಿದ್ದಾರೆ. ಪಕ್ಷದ ವೈದ್ಯ ಘಟಕದ ನೂರಾರು ವೈದ್ಯರು ಕೈಜೋಡಿಸಿದ್ದಾರೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರತಿ ಗ್ರಾಮದಲ್ಲೂಮನೆಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ ಎಂದು ವಿವರ ನೀಡಿದರು.

ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿಗೂತಪಾಸಣಾ ಕಿಟ್ತಲುಪಿಸಲಾಗಿದೆ.ವ್ಯಕ್ತಿಯ ದೇಹದ ಉಷ್ಣತೆ, ಆಮ್ಲಜನಕದ ಪ್ರಮಾಣ ಸೇರಿ ಪ್ರಾಥಮಿಕ ತಪಾಸಣೆ ನಡೆಸಲಾಗುವುದು.ಆರೋಗ್ಯದ ಸಮಸ್ಯೆ ಕಂಡುಬಂದರೆತಕ್ಷಣ ಸಮೀಪದ ಆರೋಗ್ಯಕೇಂದ್ರಕ್ಕೆ ಮಾಹಿತಿ ನೀಡಲಾಗುವುದು.ಪಕ್ಷದ ಸ್ಥಳೀಯ ಸಂಸದರು, ಶಾಸಕರು, ಕಾಂಗ್ರೆಸ್ ಪಕ್ಷದ ಹಿತೈಷಿಗಳುಸಹಾಯದ ಹಸ್ತ ನೀಡಿದ್ದಾರೆ ಎಂದು ವಿವರ ನೀಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಜಿಲ್ಲೆಯಲ್ಲೂಆರೋಗ್ಯ ಹಸ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೊಳೆಹೊನ್ನೂರಿನಲ್ಲಿಶುಕ್ರವಾರ ಚಾಲನೆ ನೀಡಲಾಗಿದೆ ಎಂದರು.

ಜಿಲ್ಲಾಡಳಿತ, ಆರೋಗ್ಯ ಇಲಾಖೆಕೊರೊನಾ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿವೆ. ಭದ್ರಾವತಿ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡರಿಗೆ ಸರಿಯಾದ ಸಮಯದಲ್ಲಿ ವೆಂಟಿಲೇಟರ್ ಇಲ್ಲದೆಜೀವ ಕಳೆದುಕೊಂಡಿದ್ದಾರೆ. ಆಸ್ಪತ್ರೆಗಳ ನಿರ್ಲಕ್ಷ್ಯದ ವಿರುದ್ಧ ಸೆ. 7 ಅಥವಾ 8ರಂದು ಪ್ರತಿಭಟನೆ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಹಸ್ತ ಸಮಿತಿ ಸಂಚಾಲಕ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೀಶ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಮಂಜುಳಾ ಶಿವಣ್ಣ, ಎಸ್.ಪಿ.ಶೇಷಾದ್ರಿ, ಸಿ.ಎಸ್.ಚಂದ್ರಭೂಪಾಲ್, ರವಿಕುಮಾರ್, ಕಲಗೋಡು ರತ್ನಾಕರ, ಡಾ.ರಾಜೇಶ್, ಡಾ.ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT