ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದತಿಗೆ ಖಂಡನೆ
Last Updated 30 ಮಾರ್ಚ್ 2023, 5:35 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದಿಂದ ಗಾಂಧಿ ಪಾರ್ಕ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ವಜಾ ಮಾಡಿರುವುದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಂಡಂತಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಸಂಸತ್ ಪಾವಿತ್ರ್ಯತೆಯನ್ನೇ ಬಿಜೆಪಿ ಸರ್ಕಾರ ಹಾಳು ಮಾಡಿದೆ ಎಂದು ಪ್ರತಿಭಟನಕಾರರು ದೂರಿದರು.

‘ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದು ಅತ್ಯಂತ ಕರಾಳ ದಿನಗಳಲ್ಲಿ ಒಂದಾಗಿದೆ. ಕಾಂಗ್ರೆಸ್ ಇದನ್ನು ಒಕ್ಕೊರಲಿನಿಂದ ಖಂಡಿಸುತ್ತದೆ. ಇದು ಪ್ರಧಾನಿ ಮೋದಿ ಅವರ ಸರ್ವಾಧಿಕಾರದ ಪ್ರತೀಕ. ಬಿಜೆಪಿ
ಯನ್ನು ದೇಶದಿಂದ ದೂರ ಮಾಡು
ವುದೇ ಕಾಂಗ್ರೆಸ್ ಗುರಿ’ ಎಂದರು.

ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ಇಕ್ಕೇರಿ ರಮೇಶ್, ಪ್ರಮುಖರಾದ ಎಚ್.ಪಿ. ಗಿರೀಶ್, ಎಸ್.ಪಿ., ಶೇಷಾದ್ರಿ, ರಮೇಶ್ ಶಂಕರಘಟ್ಟ, ಜಿ.ಡಿ. ಮಂಜುನಾಥ್, ಕಲೀಂ ಪಾಶಾ, ಟಿ. ಕೃಷ್ಣಪ್ಪ, ಎಚ್.ಆರ್. ಮಹೇಂದ್ರ, ರಾಘವೇಂದ್ರ, ಸೌಗಂಧಿಕ, ಎನ್.ಡಿ. ಪ್ರವೀಣ್‌ಕುಮಾರ್, ಸ್ಟೆಲ್ಲಾ ಮಾರ್ಟಿನ್, ನಾಜೀಮಾ, ಪ್ರೇಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT